ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 NOVEMBER 2023
SHIMOGA : ಕಾಡಾನೆಗಳಿಂದ ಬೆಳೆ ಹಾನಿ ಉಂಟಾಗುತ್ತಿದ್ದು, ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರಿಗೆರೆಯಲ್ಲಿ ಘಟನೆ ಸಂಭವಿಸಿದೆ.
ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವೇನು?
ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ತೋಟ, ಗದ್ದೆಗೆ ನುಗ್ಗುತ್ತಿರುವ ಕಾಡಾನೆಗಳು ಬೆಳೆ ನಷ್ಟ ಉಂಟು ಮಾಡುತ್ತಿವೆ. ಸಾಲ ಮಾಡಿ ಬೆಳೆ ಬೆಳೆದ ರೈತ ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳೆ ನಷ್ಟಕ್ಕೆ ಸರ್ಕಾರ ಪರಿಹಾರ ಕೊಡುತ್ತಿಲ್ಲ. ವಲಯ ಅರಣ್ಯಾಧಿಕಾರಿ, ಫಾರೆಸ್ಟ್ ಗಾರ್ಡ್‌ಗಳು ಮಾತ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಂತ್ವನ ಹೇಳಿ ಹೋಗುತ್ತಿದ್ದಾರೆ. ಇದರಿಂದ ರೈತನ ಕಷ್ಟ ಪರಿಹಾರ ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಷ ಸೇವಿಸುವ ಎಚ್ಚರಿಕೆ
ಕಾಡಾನೆ ಹಾವಳಿಯಿಂದ ಗ್ರಾಮಸ್ಥರಿಗೆ ಮುಕ್ತಿ ನೀಡಬೇಕು. ಇಲ್ಲವಾದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ವಿಷ ಸೇವಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಸಾರಿಗೆರೆ ಗ್ರಾಮದ ಬಳಿ ರಸ್ತೆಯಲ್ಲಿ ಕೆಲಕಾಲ ಅರಣ್ಯಾಧಿಕಾರಿಗಳನ್ನು ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಾಂತಿನಗರ ಕಲ್ಲು ತೂರಾಟ ಪ್ರಕರಣ, ಪರಿಹಾರಕ್ಕೆ ಒತ್ತಾಯ, ಪಾಲಿಕೆಯಲ್ಲಿ ಸದಸ್ಯರ ನಡುವೆ ಮಾತಿನ ಚಕಮಕಿ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















