SHIMOGA : ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ತಡೆಯೊಡ್ಡಬೇಕು ಎಂದು ಆಗ್ರಹಿಸಿ ಗೊಂದಿ ಚಟ್ನಹಳ್ಳಿ ಗ್ರಾಮಸ್ಥರು, ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಪ್ರತಿಭಟನೆ (Villagers Protest) ನಡೆಸಿದರು. ಬಳಿಕ ಜಿಲ್ಲಾ ರಕ್ಷಣಾಧಿಕಾರಿಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಗೊಂದಿ ಚಟ್ನಹಳ್ಳಿಯಲ್ಲಿ ಸುಮಾರು 15 ಕಡೆ ಪರವಾನಗಿ ಇಲ್ಲದೆ ಮದ್ಯದ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಮದಲ್ಲಿ ಮದ್ಯವೆಸನಿಗಳ ಹೆಚ್ಚಾಗಿದ್ದಾರೆ. ವಿದ್ಯಾರ್ಥಿಗಳು ಕೂಡ ಮದ್ಯಕ್ಕೆ ದಾಸರಾಗಿದ್ದಾರೆ. ಮದ್ಯ ಸೇವಿಸಿ ವಾಹನಗಳನ್ನು ವೇಗವಾಗಿ ಚಲಿಸುವುದು, ವೀಲಿಂಗ್ ಮಾಡುವುದು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಜಗಳ, ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಪೊಲೀಸ್ ಮತ್ತು ಅಬಕಾರಿ ಇಲಾಖೆಗೆ ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ