ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 30 ಜೂನ್ 2022
ಪರಿಸರ (NATURE) ರಕ್ಷಣೆಗೆ ಕಠಿಣ ಕಾನೂನು ಜಾರಿ ಮಾಡುವ ಅವಶ್ಯಕತೆ ಇದೆ. ಪರಿಸರ ನಾಶ ಮಾಡುವವರಿಗೆ ದೊಡ್ಡ ಮಟ್ಟದ ದಂಡ ಹಾಕಬೇಕಿದೆ. ಆಗ ಮಾತ್ರ ಪರಿಸರ ರಕ್ಷಣೆ ಮಾಡಲು ಸಾಧ್ಯ ಎಂದು ಹರಿಹರಪುರದ ಗೌರಿಗದ್ದೆ ಅವಧೂತ ವಿನಯ್ ಗುರೂಜಿ (VINAY GURUJI) ಅಭಿಪ್ರಾಯ ವ್ಯಕ್ತಪಡಿಸಿದರು.
ಸಕ್ರೆಬೈಲು ಆನೆ ಬಿಡಾರದಿಂದ 6 ಕಿ.ಮೀ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಸ ಹಾಕಿದವರಿಗೆ ಅರಣ್ಯ ಇಲಾಖೆ ದಂಡ ವಿಧಿಸಿದಾಗ ಮಾತ್ರ ನಮ್ಮ ಜನ ಎಚ್ಚೆತ್ತುಕೊಳ್ಳುತ್ತಾರೆ. ಇವತ್ತು ನಾವಿಲ್ಲಿ ಸ್ವಚ್ಛತಾ ಅಭಿಯಾನ ಮಾಡುತ್ತಿದ್ದೇವೆ ಅನ್ನುವುದಕ್ಕಿಂತಲೂ ಪ್ರಾಯಶ್ಚಿತ್ತ ಮಾಡುತ್ತಿದ್ದೇವೆ ಅನ್ನಬಹುದು. ತಮ್ಮ ಚಟಕ್ಕಾಗಿ ದುರಭ್ಯಾಸಕ್ಕೆ ಬಲಿಯಾಗಿ ಅದರಿಂದ ಅನಾರೋಗ್ಯಕ್ಕೆ ಒಳಗಾಗುವುದು ಮಾತ್ರವಲ್ಲದೆ, ಉತ್ತಮ ಪರಿಸರವನ್ನು (NATURE) ತಮ್ಮ ತೆವಲಿಗಾಗಿ ಹಾಳು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮನುಷ್ಯ ಮನುಷ್ಯತ್ವವನ್ನು ಮರೆತು ಅನೇಕ ಪ್ರಾಣಿಗಳ ಸಾವಿಗೆ ಕಾರಣವಾಗುತ್ತಿದ್ದಾನೆ. ಇಲ್ಲಿ ತಂದು ಹಾಕಿರುವ ಪ್ಲಾಸ್ಟಿಕ್ ತ್ಯಾಜ್ಯ ತಿಂದು ಹಲವು ಪ್ರಾಣಿಗಳು ಸಾವನ್ನಪ್ಪುತ್ತಿವೆ. ದೇವರನ್ನು ನಂಬದಿದ್ದರೂ ಪರವಾಗಿಲ್ಲ. ಪರಿಸರವನ್ನು ನಂಬಬೇಕಿದೆ. ವೀಕೆಂಡ್ ಪಾರ್ಟಿ ಮಾಡುವ ಬದಲು ವಾರಕ್ಕೊಮ್ಮೆ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಿ ಎಂದು (VINAY GURUJI) ಸಲಹೆ ನೀಡಿದರು.
‘ದುಡ್ಡು ಕೊಟ್ಟರೂ ಆಕ್ಸಿಜನ್ ಸಿಗುತ್ತಿರಲಿಲ್ಲ’
ಸರ್ಜಿ ಆಸ್ಪತ್ರೆಯ ಡಾ. ಧನಂಜಯ ಸರ್ಜಿ ಅವರು ಮಾತನಾಡಿ, ಕರೋನ ಸಂದರ್ಭ ದುಡ್ಡು ಕೊಟ್ಟರೂ ಆಕ್ಸಿಜನ್ ಸಿಗುತ್ತಿರಲಿಲ್ಲ. ಆದರೆ ಒಂದು ಮರ ಇಬ್ಬರಿಗೆ ಒಂದು ವರ್ಷಕ್ಕಾಗುವಷ್ಟು ಆಕ್ಸಿಜನ್ ಒದಗಿಸುತ್ತದೆ. ವನ್ಯ ಜೀವಿಗಳು ಬದುಕುವ ಈ ಪರಿಸರವನ್ನು ಹಾಳು ಮಾಡಬಾರದು. ಅದಕ್ಕಾಗಿ ಈ ಸ್ವಚ್ಛತಾ ಅಭಿಯಾನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ರಾಶಿ ರಾಶಿ ಕಸ, ಬಾಟಲಿಗಳು
ಸಕ್ರೆಬೈಲಿನಿಂದ 6 ಕಿ.ಮೀ ಉದ್ದಕ್ಕೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹಿಸಲಾಯಿತು. ಹೆಜ್ಜೆ ಹೆಜ್ಜೆಗೂ ಮದ್ಯದ ಬಾಟಲಿಗಳು ಬಿದ್ದದ್ದವು. ಇವುಗಳನ್ನ ಸ್ವಯಂ ಸೇವಕರು ಆಯ್ದು, ಚೀಲಕ್ಕೆ ತುಂಬಿದರು. ಅವಧೂತ ವಿನಯ್ ಗುರೂಜಿ, ಡಾ. ಧನಂಜಯ ಸರ್ಜಿ ಸೇರಿದಂತೆ ಹಲವರು ಹಲವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಸ್ವಚ್ಛ ಭಾರತ ಶ್ರೇಷ್ಠ ಭಾರತ ಘೋಷವಾಕ್ಯದೊಂದಿಗೆ ಗೌರಿಗದ್ದೆಯ ಮಹಾತ್ಮ ಗಾಂಧಿ ಟ್ರಸ್ಟ್, ಶಿವಮೊಗ್ಗದ ಸರ್ಜಿ ಫೌಂಡೇಶನ್, ಜಾವಳ್ಳಿಯ ಓಪನ್ ಮೈಂಡ್ ಶಾಲೆ, ಜೆಸಿಐ ಶಿವಮೊಗ್ಗ, ರೌಂಡ್ ಟೇಬಲ್ ಇಂಡಿಯಾ 166, ಪರೋಪಕಾರಂ, ಆಶ್ರಮ ಬಡಾವಣೆ ಹಿತರಕ್ಷಣಾ ವೇದಿಕೆ ಸಹಯೋಗದೊಂದಿಗೆ 300ಕ್ಕೂ ಹೆಚ್ಚು ಕಾರ್ಯಕರ್ತರು ಸ್ವಚ್ಛತಾ ಆಂದೋಲನದಲ್ಲಿ ಭಾಗಿಯಾಗಿದ್ದರು.
ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ, ಆರ್.ಟಿ.ಒ ಅಧಿಕಾರಿ ದೀಪಕ್, ಪರೋಪಕಾರಂ ತಂಡದ ಶ್ರೀಧರ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಿಂದ ವಿವಿಧ ರಾಜ್ಯಗಳ ರಾಜಧಾನಿಗೆ ರೈಲ್ವೆ ಸಂಪರ್ಕದ ಕುರಿತು ಮಹತ್ವದ ಚರ್ಚೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422