ಶಿವಮೊಗ್ಗ: ಭಾರಿ ಮಳೆಗೆ ಮನೆ ಗೋಡೆ ಕುಸಿದು (collapse) ವೃದ್ಧೆ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ.
ಶಿವಮೊಗ್ಗ ತಾಲೂಕು ಆಯನೂರು ಸಮೀಪದ ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಮನೆಯ ಗೋಡೆ ಕುಸಿದು ವೃದ್ಧೆ ಸಿದ್ದಮ್ಮ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಹೇಮಾವತಿ ಎಂಬುವವರಿಗೆ ಗಂಭೀರ ಗಾಯವಾಗಿದೆ.
ಪರಶುರಾಮ, ಪಲ್ಲವಿ, ಚೇತನ್ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೃದ್ಧೆಯ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, 24 ಗಂಟೆಯಲ್ಲಿ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200