ತುಂಗಾ ಜಲಾಶಯ, ನಾಲೆಗಳಿಗೆ ನೀರು ಬಿಡುಗಡೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಗಾಜನೂರು ತುಂಗಾ ಜಲಾಶಯದಿಂದ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಹಾಗೂ ಉಪ ಕಾಲುವೆಗಳಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗಾಗಿ ಜುಲೈ 2ರಿಂದಲೇ ನೀರು ಹರಿಸಲು ಕರ್ನಾಟಕ ನೀರಾವರಿ ನಿಗಮ ಆದೇಶಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಜಲಾಶಯದಿಂದ ಹರಿಸಲಾಗುತ್ತಿರುವ ಈ ನೀರು ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳ ಕೃಷಿ ಭೂಮಿಗೆ ಲಭ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tunga-Dam-Gajanuru.

ನಾಲೆಗಳಿಗೆ ನೀರು ಹರಿಸುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಮುಖ್ಯ ಮತ್ತು ಉಪನಾಲೆಗಳ ಆವರಣದಲ್ಲಿ ಯಾವುದೇ ಚಟುವಟಿಕೆ ಕೈಗೊಳ್ಳಬಾರದು. ನಾಲೆಯ ಆಸುಪಾಸಿನಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕರ್ನಾಟಕ ನೀರಾವರಿ ನಿಗಮದ ಪ್ರಕಟಣೆ ತಿಳಿಸಿದೆ.