ಗಾಜನೂರು ಡ್ಯಾಂನಿಂದ ಯಾವುದೇ ಸಂದರ್ಭ ನೀರು ಹೊರಕ್ಕೆ, ಜನರಿಗೆ ಮುನ್ನೆಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JUNE 2024

SHIMOGA : ತುಂಗಾ ಮೇಲ್ದಂಡೆ ಯೋಜನೆ ಜಲಾಶಯ (DAM) ಪೂರ್ಣ ಮಟ್ಟಕ್ಕೆ ತುಂಬಲು 4 ಅಡಿ ಬಾಕಿಯಿದೆ. ಮುಂದೆ ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿರುತ್ತದೆ.

ಜಲಾಶಯದ ಕೆಳಭಾಗ ನದಿ ಪಾತ್ರದಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆ ಮಾಡಬಾರದು. ದನ ಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡಬಾರದು. ತುಂಗಾ ನದಿ ಪಾತ್ರದ  ಗ್ರಾಮಗಳ ಪ್ರದೇಶದ ಗ್ರಾಮಸ್ಥರಿಗೆ ನದಿ ಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ತುಂಗ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಸಿಗಂದೂರು ಲಾಂಚ್‌, ವಾಹನ ಸಾಗಟ ಸ್ಥಗಿತ, ಸ್ಥಳೀಯರಲ್ಲಿ ಆತಂಕ, ಪ್ರವಾಸಿಗರಿಗು ಸಂಕಷ್ಟ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2024

Leave a Comment