ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಮದುವೆಯಾಗಿ (Marriage) ಆರು ತಿಂಗಳಿಗೆ ಪತಿ ಮತ್ತು ಅತ್ತೆಯ ಕಿರುಕುಳಕ್ಕೆ ಮನನೊಂದು ವಿಷ ಸೇವಿಸಿದ್ದ ಗೃಹಿಣಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗದ ಕುರಂಬಳ್ಳಿ ಬಳಿಯ ಗುಜಾನುಮಕ್ಕಿಯಲ್ಲಿ ಘಟನೆ ನಡೆದಿದೆ. ಮಾಲಾಶ್ರೀ(23) ಮೃತಪಟ್ಟ ಗೃಹಿಣಿ. ಅ.19 ರಂದು ವಿಷ ಸೇವಿಸಿದ್ದ ಮಾಲಾಶ್ರೀಯನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೂರು ದಿನದ ಬಳಿಕ ಆಕೆ ಮೃತಪಟ್ಟಿದ್ದಾರೆ.
ಪತಿ, ಅತ್ತೆಯ ಕಿರುಕುಳದ ಆರೋಪ
ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆಯ ವಾಸಿ ಮಾಲಾಶ್ರೀ 2025ರ ಏಪ್ರಿಲ್ 23 ರಂದು ಆಶೋಕ್ ಅವರನ್ನು ವಿವಾಹವಾಗಿದ್ದರು. ಮದುವೆ ಆದಾಗಿನಿಂದ ಪತಿ ಮತ್ತು ಅತ್ತೆ ಕಿರುಕುಳ ನೀಡುತ್ತಿದ್ದರು ಎಂದು ಆಕೆ ಕುಟುಂಬದವರ ಬಳಿ ಹೇಳಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಇದೆ ಕಾರಣಕ್ಕೆ ಮನನೊಂದು ಆಕೆ ಗಂಡನ ಮನೆಯಲ್ಲೆ ವಿಷ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತಪಟ್ಟ ವಿಚಾರ ತಿಳಿಸಿರಲಿಲ್ಲ
ಘಟನೆ ಸಂಬಂಧ ಮಾಲಾಶ್ರೀ ತಂದೆ ಗಣಪತಿ ದೂರು ನೀಡಿದ್ದಾರೆ. ‘ತಮ್ಮ ಮಗಳಿಗೆ ಆರೋಗ್ಯ ಸರಿ ಇಲ್ಲದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಳಿಯ ಕರೆ ಮಾಡಿ ತಿಳಿಸಿದ್ದ. ಎರಡು ದಿನದ ಬಳಿಕ ಆರೋಗ್ಯ ವಿಚಾರಿಸಲು ಕರೆ ಮಾಡಿದಾಗ ಐಸಿಯುನಲ್ಲಿ ಇದ್ದಾಳೆ ಎಂದು ಹೇಳಿದ್ದ. ಆತಂಕದಿಂದ ಕುಟುಂಬದವರು ಮೆಗ್ಗಾನ್ ಆಸ್ಪತ್ರೆಗೆ ಬಂದಾಗ ಮಗಳು ಮೃತಪಟ್ಟಿದ್ದಾಳೆ ಎಂದು ಫೋನಿನಲ್ಲಿ ತಿಳಿಸಿದ್ದʼ ಎಂದು ಆರೋಪಿಸಿದ್ದಾರೆ.

ಸದ್ಯ ಮಾಲಾಶ್ರೀ ಪತಿ ಅಶೋಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣ, ಅನುಮಾನದ ಮೇಲೆ ಮಹಿಳೆ ವಿಚಾರಣೆ, ಸಖಿ ಕೇಂದ್ರಕ್ಕೆ ರವಾನೆ, ಏನಿದು ಕೇಸ್?
Marriage






