ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 20 NOVEMBER 2024 : ಶಿವಮೊಗ್ಗ ತಾಲೂಕಿನ ವಿವಿಧೆಡೆ ಪುನಃ ಕಾಡಾನೆಗಳು (Wild Elephant) ಪ್ರತ್ಯಕ್ಷವಾಗಿವೆ. ತೋಟ, ಗದ್ದೆಗೆ ನುಗ್ಗಿ ಬೆಳೆ ಹಾನಿ ಉಂಟು ಮಾಡಿವೆ.
ಶೆಟ್ಟಿಹಳ್ಳಿ ಅಭ್ಯಯಾರಣ್ಯ ವ್ಯಾಪ್ತಿಯಲ್ಲಿ ಶಿವಮೊಗ್ಗ ತಾಲೂಕಿನ ಹಲವು ಗ್ರಾಮದಲ್ಲಿ ನಿನ್ನೆ ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು, ಬೆಳೆ ನಾಶ ಮಾಡಿವೆ. ತಾಲೂಕಿನ ಆಡಿನಕೊಟ್ಟಿಗೆ, ಕೂಡಿ, ತಮ್ಮಡಿಹಳ್ಳಿ ಹಾಗೂ ಚೌಡಿಕಟ್ಟೆ ಭಾಗದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು, ಅಡಿಕೆ ಗಿಡಗಳನ್ನು ಮುರಿದು, ಕಿತ್ತು ಬಿಸಾಡಿವೆ.
ಆಡಿನಕೊಟ್ಟಿಗೆಯ ಗಿರೀಶ್, ಹೊನ್ನಪ್ಪ, ಸಂತೋಷ್ ಎಂಬುವರ ಜಮೀನಿನಲ್ಲಿ ಆನೆಗಳು ದಾಳಿ ಮಾಡಿದ್ದು, ಬೆಳೆಯನ್ನು ಹಾಳು ಮಾಡಿವೆ.
ಕ್ಯಾಮರಾದಲ್ಲಿ ಸೆರೆ ಸಿಕ್ಕ ಕಾಡಾನೆ
ಆನೆಗಳು ಗುಂಪು ಜೋಳ ಹಾಗೂ ಭತ್ತದ ಗದ್ದೆಯಲ್ಲಿ ಹಗಲು ವೇಳೆ ಓಡಾಡುವುದನ್ನು ರೈತರು ವಿಡಿಯೋ ಮಾಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಟಾಪ್ 10 ಸುದ್ದಿ | 21 ನವೆಂಬರ್ 2024 – ಓದಲು ಇಲ್ಲಿ ಕ್ಲಿಕ್ ಮಾಡಿ
ಇನ್ನು ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಬಗ್ಗೆ ರೈತರು, ಅರಣ್ಯ ಇಲಾಖೆಗೆ ದೂರು ಸಲ್ಲಿಸುತ್ತಿದ್ದರೂ, ಇಲಾಖೆಯು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ತಾಲೂಕಿನ ವೀರಗಾರನ ಬೈರನಕೊಪ್ಪ ಬಳಿ ವಿದ್ಯುತ್ ಸ್ಪರ್ಶಿಸಿ, ಆನೆ ಮೃತಪಟ್ಟ ಬಳಿಕ ಕಾಡಾನೆ ಹಾವಳಿ ಕೊಂಚ ಕಡಿಮೆಯಾಯ್ತು ಎನ್ನುವ ಹೊತ್ತಿನಲ್ಲೇ ಕಾಡಾನೆ ಉಪಟಳ ಮತ್ತೆ ಪ್ರಾರಂಭವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422