ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2021
ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಸಚಿವರ ಮುಂದೆಯೇ ಪಿಡಿಒಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಹಸೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿ ನಿರ್ವಹಣೆ ಕುರಿತು ಟಾಸ್ಕ್ ಫೋರ್ಸ್ ಸಭೆ ನಡೆಸಲಾಯಿತು. ಈ ವೇಳೆ ಗ್ರಾಮದ ಮಹಿಳೆಯೊಬ್ಬರು ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಅಶೋಕ್ ನಾಯ್ಕ್ ಅವರ ಮುಂದೆಯೇ ಪಿಡಿಒಗೆ ತರಾಟೆ ತೆಗೆದುಕೊಂಡರು.
ಮಹಿಳೆಯ ಆಕ್ಷೇಪಕ್ಕೆ ಕಾರಣವೇನು?
ಗ್ರಾಮದಲ್ಲಿ ಸ್ಯಾನಿಟೈಸ್ ಮಾಡಿದ್ದೇವೆ. ಟೆಸ್ಟ್ಗಳನ್ನು ಮಾಡಿಸಿದ್ದೇವೆ ಎಂದು ಪಿಡಿಒ ಸಭೆಗೆ ಮಾಹಿತಿ ನೀಡಿದರು. ಇದರಿಂದ ಆಕ್ರೋಶಗೊಂಡ ಮೀನಮ್ಮ ಎಂಬ ಮಹಿಳೆ, ಸುಳ್ಳು ಮಾಹಿತಿ ಕೊಡುತ್ತಿದ್ದೀರ ಎಂದು ಸಭೆಯಲ್ಲಿ ಎದ್ದು ನಿಂತರು. ತಮ್ಮ ಮನೆಗೆ ಯಾರೊಬ್ಬರು ಬಂದಿಲ್ಲ. ಸ್ಯಾನಿಟೈಸ್ ಮಾಡಿಲ್ಲ ಎಂದು ಆರೋಪಿಸಿದರು.
ಇತ್ತ ಸಚಿವ ಕೆ.ಎಸ್.ಈಶ್ವರಪ್ಪ ಅವರು ಏರುಧ್ವನಿಯಲ್ಲಿ ಮಹಿಳೆಗೆ ಕೂರುವಂತೆ ಸೂಚಿಸಿದರು. ಇದಾಗುತ್ತಿದ್ದಂತೆ ಮಹಿಳೆಯೆ ಸಭೆಯಿಂದ ಹೊರ ನಡೆದರು.
ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






