ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA AIRPORT | 19 ಏಪ್ರಿಲ್ 2022
ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ಅತ್ಯಂತ ಸುಸಜ್ಜಿತವಾಗಿ ಎರಡನೇ ವಿಮಾನ ನಿಲ್ದಾಣ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೋಗಾನೆಯಲ್ಲಿ ನಿರ್ಮಾಣ ಹಂತದ ವಿಮಾನ ನಿಲ್ದಾಣದ ಕಾಮಗಾರಿಯ ರನ್-ವೇ, ಪ್ಯಾಸೆಂಜರ್ ಟರ್ಮಿನಲ್ ಕಾಮಗಾರಿ ಪರಿಶೀಲಿಸಿ ಯಡಿಯೂರಪ್ಪ ಅವರು ಮಾತನಾಡಿದರು. ಏಕಕಾಲಕ್ಕೆ ಎರಡು ವಿಮಾನ ನಿಲುಗಡೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಅತ್ಯಂತ ಕಡಿಮೆ ಅವಧಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಳ್ಳುತ್ತಿದೆ. 425 ಕೋಟಿ ರೂ. ವೆಚ್ಚ ಮಾಡಲಾಗಿದ್ದು ವಿಮಾನಗಳ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಕೂಡ ಇರಲಿದೆ. ಡಿಸೆಂಬರ್‌ನೊಳಗೆ ಕಾಮಗಾರಿ ಮುಕ್ತಾಯಗೊಳ್ಳಲಿದ್ದು ಡಿಸೆಂಬರ್‌ನಿಂದ ವಿಮಾನ ಹಾರಾಟ ಆರಂಭವಾಗುವ ಸಾಧ್ಯತೆ ಇದೆ ಎಂದರು.
ಕಾಮಗಾರಿ ಬಗ್ಗೆ ವಿವರಣೆ ನೀಡಿದ ಎಕ್ಸಿಕ್ಯೂಟಿವ್ ಇಂಜಿನಿಯರ್ ಸಂಪತ್, ಎಟಿಸಿ ಟವರ್ ಜೂನ್ ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಫ್ಯಾಬ್ರಿಕೇಷನ್ ಕೆಲಸ ಸೆಪ್ಟೆಂಬರ್ ಒಳಗೆ ಪೂರ್ಣಗೊಳ್ಳಲಿದೆ. ಅದಾದ ಬಳಿಕ ಕಾಮಗಾರಿ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಕರೆತರುವಂತೆ ಸೂಚನೆ
ಇನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಮಾನ ನಿಲ್ದಾಣಕ್ಕೆ ಕರೆತರುವಂತೆ ಮಾಜಿ ಸಿಎಂ ಯಡಿಯೂರಪ್ಪ ಅವರು ಸಂಸದ ರಾಘವೇಂದ್ರ ಅವರಿಗೆ ಸೂಚಿಸಿದರು. ಐದು ಹತ್ತು ನಿಮಿಷ ಬಿಡುವು ಇದ್ದರೆ ಸಿಎಂ ಅವರಿಗೆ ಕಾಮಗಾರಿ ವೀಕ್ಷಿಸುವಂತೆ ಮನವಿ ಮಾಡುವಂತೆ ಸಂಸದ ರಾಘವೇಂದ್ರ ಅವರಿಗೆ ತಿಳಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಬಿ.ಆರ್. ಸುಭಾಷ್, ಜಂಗಲ್ ಲಾಡ್ಜ್ ನಿರ್ದೇಶಕ ರಾಜೇಶ್ ಕಾಮತ್ ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ