ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MAY 2023
SHIMOGA : ಕ್ರಿಕೆಟ್ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳವಾಗಿದ್ದು ಇಬ್ಬರು ಯುವಕರು ಲಾರಿ ಚಾಲಕನ (Truck Driver) ತಲೆಗೆ ಬ್ಯಾಟ್ನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ತೀವ್ರ ನೋವಾಗಿರುವ ಹಿನ್ನೆಲೆ ಲಾರಿ ಚಾಲಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಲಾರಿ ಚಾಲಕ ದೇವಕಾತಿಕೊಪ್ಪದ ಸುಧಾಕರ್.ಎನ್ ಅವರು ಭಾನುವಾರ ಕೆಐಒಬಿ ಲೇಔಟ್ನಲ್ಲಿ ಊರಿನ ಹುಡುಗರೊಂದಿಗೆ ಕ್ರಿಕೆಟ್ ಆಡಲು ತೆರಳಿದ್ದರು. ಈ ವೇಳೆ ಕ್ಷುಲಕ ವಿಚಾರಕ್ಕೆ ಜಗಳವಾಗಿದ್ದು, ಇಬ್ಬರು ಯವಕರು ಸುಧಾಕರ್ ಮೇಲೆ ದಾಳಿ ಮಾಡಿದ್ದಾರೆ. ಒಬ್ಬಾತ ಬ್ಯಾಟ್ನಿಂದ ಸುಧಾಕರ್ (Truck Driver) ತಲೆಗೆ ಹೊಡೆದಿದ್ದಾನೆ. ಮತ್ತೊಬ್ಬ ಯುವಕ ಕೈಯಿಂದ ಮುಖಕ್ಕೆ ಗುದ್ದಿದ್ದಾನೆ ಎಂದು ಆರೋಪಿಸಲಾಗಿದೆ. ತಲೆಗೆ ತೀವ್ರ ನೋವಗಿದ್ದರಿಂದ ಇತರರು ಸುಧಾಕರ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್ಗೆ ಸಿಟಿ ಬಸ್ ಡಿಕ್ಕಿ, ರೊಚ್ಚಿಗೆದ್ದ ಜನರಿಂದ ಗ್ಲಾಸ್ಗೆ ಕಲ್ಲು
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






