ಕೂಡ್ಲಿಯಲ್ಲಿ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ, ಶೋಧ ಕಾರ್ಯಾಚರಣೆ ವೇಳೆ ಮುಳುಗುತ್ತಿದ್ದ ಮತ್ತೊಬ್ಬನ ರಕ್ಷಣೆ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021

ಹೊಳೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನಾಪತ್ತೆಯಾಗದ್ದಾನೆ. ಆತನ ಶೋಧ ಕಾರ್ಯಾಚರಣೆ ನಡೆಯತ್ತಿದ್ದ ಸಂದರ್ಭದಲ್ಲೇ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಯುವಕನೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಯುವಕ ಸುರಕ್ಷಿತವಾಗಿ ದಡ ಸೇರಿದ್ದಾನೆ.

ಬೀರೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಹರೀಶ್ ಶಿವಮೊಗ್ಗದ ಕೂಡ್ಲಿಯಲ್ಲಿ ನಾಪತ್ತೆಯಾಗಿದ್ದಾನೆ. ಪಿತೃಪಕ್ಷದ ಪೂಜೆಗಾಗಿ ಆಗಮಿಸಿದ್ದ ಹರೀಶ್, ಕೂಡ್ಲಿಯ ತುಂಗಾ, ಭದ್ರಾ ಸಂಗಮ ಸ್ಥಳದಲ್ಲಿ ಸ್ನಾನಕ್ಕೆ ಇಳಿದಿದ್ದ. ಈ ವೇಳೆ ಆತ ನಾಪತ್ತೆಯಾಗಿದ್ದಾನೆ. ಹರೀಶ್’ಗಾಗಿ ಭಾನುವಾರದಿಂದ ಶೋಧ ಕಾರ್ಯ ನಡೆಯುತ್ತಿದೆ.

ಮುಳುಗುತ್ತಿದ್ದ ಮತ್ತೊಬ್ಬನ ರಕ್ಷಣೆ

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ಕೂಡ್ಲಿಯ ಮಂಜುನಾಥ್ ಎಂಬಾತ ಹೊಳೆಯಲ್ಲಿ ಈಜುತ್ತಿದ್ದ. ಆದರೆ ನೀರಿನ ಸೆಳತ ಹೆಚ್ಚಾಗಿ ಮಂಜುನಾಥ್ ಮುಳುಗುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಜೋರಾಗಿ ಕೂಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಕಾರ್ಯಾಚರಣೆ ನಡೆಸಿ ಮಂಜುನಾಥನ ರಕ್ಷಣೆ ಮಾಡಿದ್ದಾರೆ. ಮಂಜುನಾಥನನ್ನು ದೋಣಿಯಲ್ಲಿ ಕರೆತಂದು ದಡ ಸೇರಿಸಿದ್ದಾರೆ.

1632381444428179 2

ಮುಂದುವರೆದ ಶೋಧ ಕಾರ್ಯಾಚರಣೆ

ಬೀರೂರಿನ ಹರೀಶ್’ಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕೂಡ್ಲಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಮುಂದುವರೆಸಿದ್ದಾರೆ. ಹರೀಶನ ಸಂಬಂಧಿಗಳು ಸ್ಥಳಕ್ಕೆ ಆಗಮಿಸಿದ್ದು, ಬದುಕಿ ಬರಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

NH nephrolody%2Bad %2Bkannada 10

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment