NEWS HIGHLIGHTS
SHIVAMOGGA LIVE NEWS | 5 ಏಪ್ರಿಲ್ 2022
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುರಹೊನ್ನೆ ಗ್ರಾಮದ ರವಿ (28) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯ ವ್ಯಸನಿಯಾಗಿದ್ದ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿದ್ದೇಶ್ವರ ದೇವಸ್ಥಾನ ಬಳಿ ಇರುವ ಕೆರೆಗೆ ಹಾರಿದ್ದಾನೆ ಎಂದು ಆರೋಪಿಸಲಾಗಿದೆ.
ರವಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೆರೆಗೆ ಹಾರಿ ರವಿಯನ್ನು ರಕ್ಷಿಸಿದ್ದಾರೆ. ಗಸ್ತು ವಾಹನ ಚಾಲಕ ರಂಗನಾಥ ಮತ್ತು ಕಾಶಿನಾಥ್ ಅವರು ಕೆರೆಗೆ ಹಾರಿ ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200