ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಿಂತಿದ್ದ ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿಯಾಗಿ (Car Mishap) ಫೋಟೊಗ್ರಾಫರ್ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಸಮೀಪ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಹೆಚ್.ಪಿ.ಚೇತನ್ (36) ಮೃತ ಫೋಟೊಗ್ರಾಫರ್. ಸ್ನೇಹಿತನೊಂದಿಗೆ ಕಾರಿನಲ್ಲಿ ಶಿವಮೊಗ್ಗದಿಂದ ತಮ್ಮೂರು ಭದ್ರಾವತಿ ತಾಲೂಕು ಹನುಮಂತಾಪುರಕ್ಕೆ ತೆರಳುವಾಗ ನಿಂತಿದ್ದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಚೇತನ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ.
ಚೇತನ್ ಸ್ನೇಹಿತ ಶಿವು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಇನ್ನು, ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪೈಲೆಟ್ ತರಬೇತಿ ಸಂಸ್ಥೆ, ಕನ್ನಡಿಗರಿಗೆ ಶೇ.25ರಷ್ಟು ಸೀಟ್, ಶುಲ್ಕ ವಿನಾಯಿತಿ
LATEST NEWS
- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು














