ಶಿವಮೊಗ್ಗ ಲೈವ್
ಶಿವಮೊಗ್ಗ: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗಾಜನೂರು ಜಲಾಶಯದ ಸಮೀಪ ಭಾನುವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 28 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಜೆ.ಪಿ. ನಗರದ ನದೀಮ್ (28) ಮತ್ತು ಅಯಾನ್ (18) ಮೃತರು. ಇವರು ಸ್ನೇಹಿತರೊಂದಿಗೆ ಪವರ್ಹೌಸ್ ಪಕ್ಕದಲ್ಲಿ ನದಿಗೆ ತೆರಳಿದ್ದರು. ಈ ವೇಳೆ ನೀರಿನ ಆಳದ ಅರಿವಿಲ್ಲದೆ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ತುಂಗಾನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಯಿತು. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
