ಶಿವಮೊಗ್ಗ ಲೈವ್.ಕಾಂ | ಸೊರಬ | 17 ಸೆಪ್ಟೆಂಬರ್ 2019
ಅಡಕೆ ಕೊಳೆರೋಗದಿಂದ ಸಂಕಷ್ಟಕ್ಕೀಡಾದ ಬೆಳೆಗಾರರಿಗೆ ತುರ್ತಾಗಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೊರಬದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು. ತಾಲೂಕು ಕಚೇರಿ ಮುಂದೆ ಕೊಳೆರೋಗಕ್ಕೆ ತುತ್ತಾದ ಅಡಕೆ ಸುರಿದು ಆಕ್ರೋಶ ವ್ಯಕ್ತಪಡಿಸಲಾಯಿತು.
![]() |
ಸಾರ್ವಜನಿಕರ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ಚಿದಾನಂದಗೌಡ, ಭಾರಿ ಬಿಸಿಲಿಗೆ ಅಡಕೆ ಉದುರಿದ್ದರು. ಆ ಬಳಿಕ ಸುರಿ ಜೋರು ಮಳೆಗೆ ಕೊಳೆ ರೋಗ ಬಂದಿದೆ. ಇದರಿಂದ ಬೆಳಗಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂದರು.
ಕೊಳೆ ರೋಗಕ್ಕೆ ತುತ್ತಾಗಿರುವ ಅಡಿಕೆಯನ್ನು ಸಮೀಕ್ಷೆ ನಡೆಸಬೇಕು. ರೈತರಿಂದ ಅರ್ಜಿ ಪಡೆಯುವಾಗ ಪಹಣಿ ಪಡೆಯುವ ಪದ್ಧತಿ ಕೈಬಿಟ್ಟು, ಸರ್ವೆ ನಂಬರ್ ಮಾತ್ರ ನಮೂದಿಸುವಂತೆ ಸೂಚಿಸಬೇಕು. ತುರ್ತಾಗಾಗಿ ಕೊಳೆರೋಗಕ್ಕೆ ತುತ್ತಾಗಿರುವ ಅಡಿಕೆ ಬೆಳೆಗೆ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಪಟ್ಟರಾಜ ಗೌಡ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬಿಎಸ್ಎನ್ಡಿಪಿ ತಾಲೂಕು ಅಧ್ಯಕ್ಷ ಶಿವಕುಮಾರ ಬಿಳವಗೋಡು, ಗ್ರಾಪಂ ಸದಸ್ಯ ಎ. ಶಿವರಾಜ್ ಸಾರೇಮರೂರು, ಪ್ರಮುಖರಾದ ನಾಗಪ್ಪ ನಡಹಳ್ಳಿ, ಕುಬೇರಪ್ಪ, ತೇಜಪ್ಪ, ಮಂಜಪ್ಪ, ರಾಜಶೇಖರಪ್ಪ ಗೌಡ, ಮಾರುತಿ, ಶೇಖರಪ್ಪ, ಷಣ್ಮುಖಪ್ಪ ಹರಗಿ, ಪಿ.ಕೆ. ಮಂಜುನಾಥ್ ಗುಡುವಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200