ಸಾಗರ: ನಾನು ಸಚಿವ (Minister) ಸ್ಥಾನದ ಪ್ರಬಲ ಆಕಾಂಕ್ಷಿ. ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪತ್ರಕರ್ತರ ಜೊತೆ ಮಾತನಾಡಿದ ಅವರು, ಸಚಿವ ಸ್ಥಾನ ಕೊಡಿ ಎಂದು ಎಐಸಿಸಿ ಅಧ್ಯಕ್ಷ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಈಡಿಗ ಸಮುದಾಯದ ಪ್ರಮುಖರು ನನಗೆ ಸಚಿವ ಸ್ಥಾನ ಕೊಡಿ ಎಂದು ಪಕ್ಷದ ಮೇಲೆ ಒತ್ತಡ ಹೇರಬೇಕು ಎಂದು ನಾನು ಒತ್ತಾಯಿಸುವುದಿಲ್ಲ. ಒತ್ತಡ ತರುವುದು ಬಿಡುವುದು ಅವರಿಗೆ ಬಿಟ್ಟಿದ್ದು. ಒಟ್ಟಾರೆ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಅಭಿವೃದ್ದಿ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ಸೋಮಶೇಖರ ಲ್ಯಾವಿಗೆರೆ, ರವಿಕುಮಾರ್, ಗಿರೀಶ್ ಕೋವಿ, ಮಹಾಬಲ ಕೌತಿ, ವಿಲ್ಸನ್, ರವೀಂದ್ರ ಸಾಗರ್, ಅನ್ವರ್ ಭಾಷಾ, ಕಲ್ಲಪ್ಪ ಮೆಣಸಿನಾಳ್, ಲಿಂಗರಾಜ್ ಆರೋಡಿ ಸೇರಿ ಹಲವರು ಇದ್ದರು.
ಇದನ್ನೂ ಓದಿ » KGFಗೆ ತೆರಳಲು ಶಿವಮೊಗ್ಗದಲ್ಲಿ ಬೆಂಗಳೂರು ಬಸ್ ಹತ್ತಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





