ಚಂದ್ರಗುತ್ತಿ ಜಾತ್ರೆ, ಮಹತ್ವದ ಆದೇಶ ಹೊರಡಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ, ಏನದು?

ಶಿವಮೊಗ್ಗ: ಸೊರಬ ತಾಲೂಕಿನ ಚಂದ್ರಗುತ್ತಿ (Chandragutti) ಗ್ರಾಮದಲ್ಲಿ ಫೆಬ್ರವರಿ 24 ಮತ್ತು 25ರಂದು ರೇಣುಕಂಬಾ ದೇವಿ ಜಾತ್ರೆ ನಡೆಯಲಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಈ ವೇಳೆ ಬೆತ್ತಲೆ ಸೇವೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅನ್ವಯ ರೇಣುಕಮ್ಮದೇವಿಯ ಜಾತ್ರಾ ಮಹೋತ್ಸವದಲ್ಲಿ ‘ಬೆತ್ತಲೆ ಸೇವೆ’ಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ನಿಷೇಧಾಜ್ಞೆಯು ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯ ಮತ್ತು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

Chandragutti-Temple-Soraba.

ಇದನ್ನೂ ಓದಿ – ಚಂದ್ರಗುತ್ತಿ ರೇಣುಕಾಂಬಾ ದೇಗುಲದಲ್ಲಿ ಕಾಣಿಕೆ ಎಣಿಕೆ, ಹುಂಡಿಯಲ್ಲಿ ಎಷ್ಟಿತ್ತು?

Leave a Comment