ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS |4 JANUARY 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೊರಬ : ಬೀದಿ ದೀಪಗಳನ್ನು (street light) ಸರಿಯಾಗಿ ನಿರ್ವಹಣೆ ಮಾಡದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಪುರಸಭೆಯ ವಿಶೇಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸೊರಬ ಪುರಸಭೆಯಲ್ಲಿ ಅಧ್ಯಕ್ಷ ಈರೇಶ್ ಮೇಸ್ತ್ರಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ಹಿಂದೆ ಪುರಸಭೆ ವ್ಯಾಪ್ತಿಯ 23 ವಾರ್ಡ್ ಗಳಲ್ಲಿ ಬೀದಿ ದೀಪಗಳ ನಿರ್ವಹಣೆಗೆ ವಿಫಲವಾಗಿರುವ ಮತ್ತು ನಿರ್ಲಕ್ಷ್ಯ ತೋರಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನಿರ್ಣಯಿಸಲಾಯಿತು.
ಹಿಂದೆ ಬೀದಿ ದೀಪಗಳ (street light) ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆದಾರರು ಪುನಃ ಅರ್ಜಿ ಸಲ್ಲಿಸಿದ್ದಾರೆ. ನಿರ್ಲಕ್ಷ್ಯ ತೋರಿರುವ ಗುತ್ತಿಗೆದಾರಿಗೆ ಪುನಃ ಅವಕಾಶ ಕೊಡಬೇಕೆ ಎಂದು ಚರ್ಚೆ ನಡೆಸಲಾಯಿತು. ಕೊನೆಗೆ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.
ಟ್ರಾಲಿ ಕಳ್ಳತನ, ಎಸ್ಪಿ ಭೇಟಿಗೆ ನಿರ್ಧಾರ
ಇನ್ನು, ಈ ಹಿಂದೆ ಪುರಸಭೆಯ ಟ್ರ್ಯಾಕ್ಟರ್ ಟ್ರಾಲಿ ಕಳ್ಳತನವಾಗಿದೆ. ಪೊಲೀಸರಿಗೆ ದೂರು ನೀಡಲಾಗಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.
ಇದನ್ನೂ ಓದಿ – ಶಿಕಾರಿಪುರದಲ್ಲಿ ಮೆಸ್ಕಾಂ, ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ
ಪುರಸಭೆ ಉಪಾಧ್ಯಕ್ಷ ಮಧುರಾಯ್ ಶೇಟ್, ಸದಸ್ಯರಾದ ಎಂ.ಡಿ.ಉಮೇಶ್, ಅನ್ಸರ್ ಅಹಮದ್, ನಟರಾಜ್, ವಿಜಯಲಕ್ಷ್ಮಿ, ಪ್ರೇಮಾ, ಸುಲ್ತಾನಾ ಬೇಗಂ, ಆಫ್ರೀನ್ ಬಾನು, ಮುಖ್ಯಾಧಿಕಾರಿ ಗಿರೀಶ್ ಸಭೆಯಲ್ಲಿದ್ದರು.