ಮನೆ ಬೀಗ ಮುರಿದು ₹8.10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Published On : ಏಪ್ರಿಲ್ 18, 2026

Published By : ನಿತಿನ್‌ ಆರ್‌.ಕೈದೊಟ್ಲು 

ಸೊರಬ: ತಾಲೂಕಿನ ಸುತ್ತುಕೋಟೆ ಗ್ರಾಮದ ಮನೆಯೊಂದರ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳ್ಳತನ (burglary) ಮಾಡಿರುವ ಘಟನೆ ನಡೆದಿದೆ. ಗ್ರಾಮದ ವಿಜೇಂದ್ರಪ್ಪ ಎಂಬುವವರ ಮನೆಯಲ್ಲಿ ಈ ಕೃತ್ಯ ನಡೆದಿದೆ.

ಇದನ್ನೂ ಓದಿ : ಸೊರಬದಲ್ಲಿ ಕೃಷಿ ಭವನಕ್ಕೆ ಭೂಮಿ ಪೂಜೆ, ಏನಂದ್ರು ಮಿನಿಸ್ಟರ್?

ವಿಜೇಂದ್ರಪ್ಪ ಅವರು ಮನೆಗೆ ಬೀಗ ಹಾಕಿಕೊಂಡು ಶಿವಮೊಗ್ಗದಲ್ಲಿರುವ ಮಗನ ಮನೆಯಲ್ಲಿ ಪೂಜೆಗಾಗಿ ಪತ್ನಿ ಸಮೇತ ಹೋಗಿದ್ದರು. ಇದೆ ವೇಳೆ ಕಳ್ಳರು ಮನೆಯ ಬಾಗಿಲ ಬೀಗ ಮುರಿದು ಒಳನುಗ್ಗಿದ್ದಾರೆ. ಬೀರುವಿನ ಬೀಗ ಒಡೆದು ಅದರಲ್ಲಿದ್ದ ಸುಮಾರು 67 ಗ್ರಾಂ ಚಿನ್ನದ ಆಭರಣಗಳು ಮತ್ತು 50 ಗ್ರಾಂ ಬೆಳ್ಳಿಯ ವಸ್ತುಗಳನ್ನು ದೋಚಿದ್ದಾರೆ.

Soraba-Police-Station-in-Shivamogga-District.

ಕದ್ದಮಾಲುಗಳಲ್ಲಿ ಚಿನ್ನದ ನೆಕ್ಲೆಸ್, ಚೈನ್, ಉಂಗುರಗಳು ಹಾಗೂ ಜುಮುಕಿ ಸೇರಿದ್ದು, ಇವುಗಳ ಒಟ್ಟು ಮೌಲ್ಯ ₹8,10,000 ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2026

Leave a Comment