ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SORABA NEWS, 4 NOVEMBER 2024 : ಬೈಕ್ ಮತ್ತು ಕಾರಿನ (Car) ಮಧ್ಯೆ ಅಪಘಾತವಾಗಿ ಸವಾರ ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸೊರಬ ತಾಲೂಕು ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಮೇಲೆ ಘಟನೆ ಸಂಭವಿಸಿದೆ.
ಹೊಸನಗರ ತಾಲೂಕು ಕಾರಕ್ಕಿಯ ಸುದರ್ಶನ್ (22) ಮೃತಪಟ್ಟಿದ್ದಾನೆ. ಬೈಕ್ನಲ್ಲಿದ್ದ ಬೆಳ್ಳಮ್ಮ ಪುಟ್ಟಪ್ಪ ಚಿಟ್ಟಕ್ಕಿ (65) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಸೊರಬದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೈಕ್ ಹೊಸನಗರದಿಂದ ಸೊರಬ ಮಾರ್ಗವಾಗಿ ಭದ್ರಾಪುರ ಗ್ರಾಮಕ್ಕೆ ತೆರಳುತ್ತಿತ್ತು. ಚಂದ್ರಗುತ್ತಿ ಕಡೆಯಿಂದ ಆಗಮಿಸಿದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವವಾಗಿ ಸುದರ್ಶನ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ‘ಸಾಧು, ಸಂತರ ನೇತೃತ್ವದಲ್ಲಿ ರಕ್ತ ಕ್ರಾಂತಿ’, ಸರ್ಕಾರಕ್ಕೆ ಈಶ್ವರಪ್ಪ ವಾರ್ನಿಂಗ್
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





