ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಆನವಟ್ಟಿ: ಜಮೀನು ಅಳತೆ ಕಾರ್ಯ ಮುಗಿಸಿ ನಿಂತಿದ್ದ ಭೂಮಾಪಕರೊಬ್ಬರಿಗೆ (surveyor) ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ. ಸೊರಬ ತಾಲೂಕು ಕಚೇರಿಯ ಭೂಮಾಪಕ ಎಂ.ಎಂ. ಮಹದೇವಸ್ವಾಮಿ (56) ಗಾಯಗೊಂಡವರು.
ಲಕ್ಕವಳ್ಳಿ ಗ್ರಾಮದಲ್ಲಿ ಮಹದೇವಸ್ವಾಮಿ ಅವರು ಅಳತೆ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿ ರಸ್ತೆ ಪಕ್ಕದಲ್ಲಿ ನಿಂತಿದ್ದಾಗ, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮಹದೇವಸ್ವಾಮಿ ಅವರ ಬಲಗೈಗೆ ತೀವ್ರ ಪೆಟ್ಟು ಬಿದ್ದಿದೆ. ಗಾಯಾಳುವನ್ನು ಮೊದಲು ಆನವಟ್ಟಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆರಾಧನಾ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕಾರು ಚಾಲಕ ಮಹೇಶ್ ಎಂಬುವವರ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

LATEST NEWS
- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

- ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

- ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು











