ಸೊರಬ: ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬ ದೇವಸ್ಥಾನಲ್ಲಿ ಆಯುಧ ಪೂಜೆಯಂದು ಚಂಡಿಕಾ ಹೋಮ ನಡೆಸಲಾಯಿತು. ಪ್ರಧಾನ ಅರ್ಚಕ ಅರವಿಂದ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಾವಿರ ಸಾವಿರ ಭಕ್ತರು
ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ, ಸೇರಿ ವಿವಿಧೆಡೆಯ ಭಕ್ತರು ಹೋಮ, ಪೂಜೆಯಲ್ಲಿ ಭಾಗವಹಿಸಿದ್ದರು. ಮಳೆ ನಡವೆಯು ಸಾವಿರಾರು ಭಕ್ತರು ರೇಣುಕಾದೇವಿಯ ದರ್ಶನ ಪಡೆದರು. ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.
ಪರಿವಾರ ದೇವರುಗಳಿಗೆ ಪೂಜೆ
ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಈ ಸಂದರ್ಭ ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರ 1ಗೆ ಅದ್ಧೂರಿ ರೆಸ್ಪಾನ್ಸ್, ಪ್ರೀಮಿಯರ್ ಶೋಗಳು ಹೌಸ್‌ಫುಲ್, ಏನಂದ್ರು ಜನ?
ದೊಡ್ಡ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ ಚಂದ್ರಗುತ್ತಿಯಲ್ಲಿ ಸ್ವಲ್ಪ ಸಮಯ ಸಂಚಾರ ದಟ್ಟಣೆ ಉಂಟಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
Chandragutti
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





