ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA NEWS | 17 MARCH 2021
ಕರೋನ ಸೋಂಕು ಹರಡದಂತೆ ತಡೆಗಟ್ಟಬೇಕಿರುವುದರಿಂದ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಲಾಗಿದೆ. ಸ್ಥಳೀಯರು ಮಾತ್ರ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 19ರಿಂದ 24ರವರೆಗೆ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರೆ ನಡೆಯಲಿದೆ. ಈಗಾಗಲೇ ಜಾತ್ರೆಗೆ ಸಿದ್ಧತೆ ಆರಂಭವಾಗಿದೆ. ವಿವಿಧ ಜಿಲ್ಲೆ, ಹೊರ ರಾಜ್ಯದಿಂದ ದೊಡ್ಡ ಸಂಖ್ಯೆಯ ಭಕ್ತರು ಜಾತ್ರೆಗೆ ಬರುತ್ತಾರೆ.
ಇದನ್ನೂ ಓದಿ | ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರೆ, ಪೂರ್ವಭಾವಿ ಸಭೆ, ಏನೆಲ್ಲ ಚರ್ಚೆಯಾಯ್ತು? ನಿರ್ಧಾರವೇನು?
ಕೋವಿಡ್ ಎರಡನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವುದಕ್ಕೆ ನಿಷೇಧ ವಿಧಿಸಲಾಗಿದೆ. ಜಾತ್ರೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನ, ರಥೋತ್ಸವ ಮತ್ತು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದಕ್ಕೆ ನಿಷೇಧ ವಿಧಿಸಲಾಗಿದೆ.
ಇದನ್ನೂ ಓದಿ | ಚಂದ್ರಗುತ್ತಿಯಲ್ಲಿ ಮುಜರಾಯಿ ಇಲಾಖೆ ಆಡಳಿತ ಕಟ್ಟಡ ಉದ್ಘಾಟನೆ, ಸುಸಜ್ಜಿತ ಪ್ರವಾಸಿ ತಾಣವಾಗಿ ರೂಪಿಸಲು ಪ್ಲಾನ್
ಜಾತ್ರೆ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಯಾವುದೆ ವಾಣಿಜ್ಯ ಚಟುವಟಿಕೆ ನಡೆಸುವಂತಿಲ್ಲ. ಇನ್ನು, ಜಾತ್ರೆಗೆ ಆಗಮಿಸುವ ಸಾರ್ವಜನಿಕರನ್ನು, ವಾಹನಗಳನ್ನು ನಿಗದಿಪಡಿಸಿದ ಚೆಕ್ಪೋಸ್ಟ್ನಲ್ಲಿ ತಡೆದು ಹಿಂದಕ್ಕೆ ಕಳುಹಿಸುವಂತೆ ತಹಶೀಲ್ದಾರ್ ಮತ್ತು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422