ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 FEBRUARY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SORABA : ಸರ್ಕಾರದ ಮಾರ್ಗಸೂಚಿಯಂತೆ ಕಳೆದ ಬಾರಿಯಂತೆ ಈ ವರ್ಷವೂ ತಾಲೂಕಿನ ಇತಿಹಾಸ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬೆ ದೇವಿಯ ಜಾತ್ರಾ ಮಹೋತ್ಸವ ಮಾ.15 ರಿಂದ 20ರವರೆಗೆ ನಡೆಯಲಿದೆ ಎಂದು ಸಾಗರ ಉಪ ವಿಭಾಗಾಧಿಕಾರಿ ಆರ್.ಯತೀಶ್ ಹೇಳಿದರು.
ತಾಲೂಕಿನ ಚಂದ್ರಗುತ್ತಿ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಿ ಮಹಾರಥೋತ್ಸವ ಮಾ.18ರಂದು ಜರುಗಲಿದೆ. ಸಣ್ಣ ತೇರು 17ರಂದು ನಡೆಯಲಿದೆ ಎಂದರು.
ಶೌಚಗೃಹ, ಸ್ನಾನಗೃಹ, ಕಾಂಪೌಂಡ್ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಕ್ಷೇತ್ರಕ್ಕೆ 52 ಲಕ್ಷ ರೂ. ಅನುದಾನ ಬಿಡುಗಡೆ ಆಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಸುಲಭ ಹಾಗೂ ಸುಗಮ ಸಂಚಾರ, ಶೌಚಗೃಹ, ಕುಡಿಯುವ ನೀರು, ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ಹುಣ್ಣಿಮೆ ಹಾಗೂ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ದೇವಿಗೆ ಸೇವೆ ಸಲ್ಲಿಸುವ, ವಾದ್ಯ ಬಾರಿಸುವ, ತೇರು ಕಟ್ಟುವ, ಪಲ್ಲಕ್ಕಿ ಹೊರುವ ಕಾರ್ಮಿಕರಿಗೆ ಹಿಂದಿನಿಂದಲೂ ಕನಿಷ್ಠ ಗೌರವ ಧನ ನೀಡಲಾಗುತ್ತಿದ್ದು ಇನ್ನಾದರೂ ಹೆಚ್ಚಳ ಮಾಡುವಂತೆ ಸಭೆಯಲ್ಲಿ ಒತ್ತಾಯಿಸಲಾಯಿತು. ಅಂಗಡಿಗಳಲ್ಲಿ ರಾಸಾಯನಿಕ ಕುಂಕುಮ ಮಾರಾಟ ಮಾಡದಂತೆ ಸೂಚನೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ತಹಸೀಲ್ದಾರ್ ಹುಸೇನ್ ಸರಕಾವಸ್, ಇಒ ಪ್ರದೀಪಕುಮಾರ್, ದೇವಸ್ಥಾನದ ಆಡಳಿತಾಧಿಕಾರಿ ಶಿವಪ್ರಸಾದ್, ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ಪಿಎಸ್‌ಐ ನಾಗರಾಜ್, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಉಪಾಧ್ಯಕ್ಷ ರೇಣುಕಪ್ರಸಾದ್, ಪ್ರಮುಖರಾದ ಲಕ್ಷ್ಮೀ, ರತ್ನಾಕರ್, ರಾಜಶೇಖರ, ಎನ್.ಜಿ.ನಾಗರಾಜ್ ಇತರರಿದ್ದರು.
ಇದನ್ನೂ ಓದಿ – ಪತ್ನಿ ಜೊತೆ ಊರಿಗೆ ತೆರಳಿದ್ದಾಗ ಪಕ್ಕದ ಮನೆಯಿಂದ ಬಂತು ಫೋನ್, ಗಡಿಬಿಡಿಯಲ್ಲಿ ವಾಪಸ್, ದಾಖಲಾಯ್ತು ಕೇಸ್