ಸೊರಬ : ಇತಿಹಾಸ ಪ್ರಸಿದ್ಧ ಚಂದ್ರಗುತ್ತಿಯ ರೇಣುಕಾಂಬಾ ದೇವಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ (Ratotsava) ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಭಕ್ತರು ಪಾಲ್ಗೊಂಡು ದೇವಿಯ ಕೃಪೆ ಬೇಡಿದರು.
ಉಪವಿಭಾಗಾಧಿಕಾರಿ ಆರ್.ಯತೀಶ್, ವಿವಿಧ ಧಾರ್ಮಿಕ ವಿಧಿ–ವಿಧಾನಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಶ್ರೀದೇವಿಯ ನಾಮ ಸ್ಮರಣೆಯೊಂದಿಗೆ ರಥ ಎಳೆದರು. ರಥಕ್ಕೆ ಕಾಳುಮೆಣಸು, ಉತ್ತುತ್ತಿ, ಬಾಳೆ ಹಣ್ಣು ತೂರುವ ಮೂಲಕ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.
ಬೆಳಗ್ಗೆಯಿಂದಲೆ ಧಾರ್ಮಿಕ ಕಾರ್ಯಕ್ರಮ

ರಥೋತ್ಸವದ (Ratotsava) ಅಂಗವಾಗಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರೇಣುಕಾಂಬೆಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಹರಕೆ ಹೊತ್ತವರು ದೀಡ್ ನಮಸ್ಕಾರ ಹಾಕಿದರು. ಪಡ್ಲಿಗೆ ತುಂಬಿಸುವುದು, ಚೌಳ, ಮಕ್ಕಳಿಗೆ ಕಿವಿ ಚುಚ್ಚಿಸುವ ಕಾರ್ಯಕ್ರಮಗಳು ನಡೆದವು. ಕೆಳದಿಯ ರಾಮ್ ಭಟ್ ಹಾಗೂ ದೇವಾಲಯದ ಪ್ರಧಾನ ಅರ್ಚಕ ಅರವಿಂದ ಭಟ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು.
ಇದನ್ನೂ ಓದಿ » ಪ್ರತಿದಿನ 7 ರಿಂದ 8 ಸಾವಿರ ರೂ. ಲಾಭ, ಮನೆಯಲ್ಲೆ ಕುಳಿತು ಗಳಿಸಬಹುದು ಹಣ, ಮುಂದೇನಾಯ್ತು?
ರೈತರು ತಾವು ಬೆಳೆದ ಅಡಿಕೆ, ಬಾಳೆ ಫಸಲನ್ನು ರಥಕ್ಕೆ ಸಮರ್ಪಿಸಿದರು. ಭಕ್ತರು ಹೂವಿನ ಹಾರಗಳನ್ನು ಮೆರವಣಿಗೆ ಮೂಲಕ ತಂದು ರಥಕ್ಕೆ ಅರ್ಪಿಸುವುದು ವಿಶೇಷವಾಗಿತ್ತು.
ರಾಜ್ಯದ ವಿವಿಧೆಡೆಯ ಭಕ್ತರು
ದೇವಿಯ ಮಹಾ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಹಾವೇರಿ, ದಾವಣಗೆರೆ, ಬಳ್ಳಾರಿ, ಹುಬ್ಬಳ್ಳಿ, ಶಿವಮೊಗ್ಗ, ಬ್ಯಾಡಗಿ, ರಾಣೆಬೆನ್ನೂರು, ರಾಯಚೂರು, ಚಿತ್ರದುರ್ಗ ಸೇರಿದಂತೆ ಉತ್ತರ ಕರ್ನಾಟಕ ಮತ್ತು ವಿವಿಧ ಜಿಲ್ಲೆಗಳ ಭಕ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ » ಗೋಧಿಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಶಿವಮೊಗ್ಗದ ಉದ್ಯಮಿ, ಆಗಿದ್ದೇನು?
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ತಹಶೀಲ್ದಾರ್ ಮಂಜುಳಾ ಹೆಗಡಾಳ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ.ಪ್ರಮೀಳಾ ಕುಮಾರಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್. ಗಣಪತಿ ಹುಲ್ತಿಕೊಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ, ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್ ಸೇರಿ ಹಲವರು ಭಾಗವಹಿಸಿದ್ದರು.
ಇದನ್ನೂ ಓದಿ » ರಾಜ್ಯ ಬಜೆಟ್, ಶಿವಮೊಗ್ಗಕ್ಕೆ ಸಿಕ್ಕಿದ್ದೇನು? ಪಟ್ಟಿ ಪ್ರಕಟಿಸಿದ ಮಿನಿಸ್ಟರ್ ಮಧು ಬಂಗಾರಪ್ಪ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200