ಶಿವಮೊಗ್ಗ ಲೈವ್.ಕಾಂ | 22 ಮಾರ್ಚ್ 2019
ಲೋಕಸಭೆ ಚುನಾವಣೆ ಸಂಬಂಧ ನ್ಯೂಸ್ ಚಾನೆಲ್ ಒಂದರ ಕಾರ್ಯಕ್ರಮದ ಚಿತ್ರೀಕರಣದ ವೇಳೆ, ಕಾಂಗ್ರೆಸ್ – ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಸಿದ್ದಾರೆ. ಈ ಸಂಬಂಧ ಸೊರಬ ಠಾಣೆಲ್ಲಿ ದೂರು, ಪ್ರತಿದೂರು ಸಲ್ಲಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಚಿತ್ರೀಕರಣದ ಸಂದರ್ಭ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಈ ಸಂಬಂಧ ಅಣ್ಣಪ್ಪ ಎಂಬುವವರು ದೂರು ನೀಡಿದ್ದಾರೆ. ರಾಜಕೀಯ ದ್ವೇಷದಿಂದ ತಮ್ಮ ಮೇಲೆ ಹಲ್ಲೆ ಮಾಡಲಾಗಿದೆ ಎಂದು ದೂರಿದ್ದಾರೆ. ಮತ್ತೊಂದೆಡೆ ಪ್ರಭಾಕರ್ ಎಂಬುವವರು ಪ್ರತಿದೂರು ನೀಡಿದ್ದು, ತಮ್ಮ ವಿರುದ್ಧ ಅಣ್ಣಪ್ಪ ಸೇರಿದಂತೆ ಹಲವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸೊರಬದ ಖಾಸಗಿ ಬಸ್ ನಿಲ್ದಾಣದಲ್ಲಿ ಲೋಕಸಭೆ ಚುನಾವಣೆ ಸಂಬಂಧ ಅಭಿಪ್ರಾಯ ಸಂಗ್ರಹಿಸುವ ಕಾರ್ಯಕ್ರಮವನ್ನು ನ್ಯೂಸ್ ಚಾನೆಲ್ ಆಯೋಜಿಸಿತ್ತು. ಈ ವೇಳೆ ಗಲಾಟೆಯಾಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]