ಶಿವಮೊಗ್ಗ ಲೈವ್.ಕಾಂ | SORABA NEWS | 28 FEBRUARY 2021
105 ಕೋಟಿಯ ಮೂಗೂರು ಏತ ನೀರಾವರಿ ಯೋಜನೆಯಿಂದ ಸೊರಬ ತಾಲೂಕಿನ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು, ಅಂತರ್ಜಲ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೊರಬ ತಾಲೂಕು ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ ಮಾತನಾಡಿದರು.
ಮೂಗೂರು ಏತ ನೀರಾವರಿ ಯೋಜನೆಯಿಂದ 31 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಇದರಿಂದ ಸೊರಬ ತಾಲೂಕಿನ ಬಹುಭಾಗಕ್ಕೆ ಕುಡಿಯುವ ನೀರು ಲಭಿಸಲಿದೆ ಎಂದರು.
ಸೊರಬದಲ್ಲಿ ಅಭಿವೃದ್ಧಿ ಪರ್ವ
ಸೊರಬ ತಾಲೂಕಿನಲ್ಲಿ ಹಲವು ಯೋಜನೆಗಳ ಜಾರಿಗೊಳಿಸಲಾಗುತ್ತಿದೆ. 9 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಭಾಗದ 15 ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳವಿ ಗ್ರಾಮದಲ್ಲಿ ನೂತನ ರೈತ ಸಂಪರ್ಕ ಕೇಂದ್ರ, ಗುಡವಿ ಗ್ರಾಮದಲ್ಲಿ ಆಯುರ್ವೇದ ಆಸ್ಪತ್ರೆ, ಭಾರಂಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ಲೋಕಾರ್ಪಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
71 ಗ್ರಾಮಗಳಲ್ಲಿ 13.40 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸುಮಾರು 54 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ, ವೇ ಬ್ರಿಡ್ಜ್, ಶಾಲಾ ಕೊಠಡಿ, ವಿದ್ಯುತ್ ಉಪಕೇಂದ್ರ ಸೇರಿದಂತೆ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.
ಬಜೆಟ್‍ನಲ್ಲಿ ಮಹಿಳೆಯರಿಗೆ ಆದ್ಯತೆ
ಈ ಬಾರಿ ಬಜೆಟ್‍ನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಜೆಟ್ ನಲ್ಲಿ ಮಹಿಳೆಯರ ಅಭ್ಯುದಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುತ್ತದೆ. ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿ ಅಭಿವೃದ್ಧಿ ಪಥದತ್ತ ದೃಢ ಹೆಜ್ಜೆ ಇಡಲಾಗುತ್ತಿದೆ ಎಂದರು.
ಲೋಕಸಭಾ ಸದಸ್ಯ ಬಿ.ವೈರಾಘವೇಂದ್ರ, ನಗರಾಭಿವೃದ್ಧಿ ಸಚಿವ ಬಸವರಾಜು, ಶಾಸಕ ಕುಮಾರ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200