ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | ANAVATTI NEWS | 17 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೊರಬ ತಾಲೂಕು ಆನವಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಈ ಭಾಗದ ಪ್ರಮುಖ ನಾಯಕರಾಗಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದರಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಶಕ್ತಿ ಬರಲಿದೆ ಎಂದು ತಿಳಿಸಿದರು.
ತೀರ್ಥಹಳ್ಳಿ, ಭದ್ರಾವತಿ ಫಲಿತಾಂಶ ಸಾಕ್ಷಿ
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಬಲವಾಗಲಿದೆ. ಅಧಿಕಾರಕ್ಕೂ ಬರಲಿದೆ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ, ಭದ್ರಾವತಿ ನಗರಸಭೆ ಚುನಾವಣೆಯ ಫಲಿತಾಂಶಗಳೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಪ್ರಸನ್ನಕುಮಾರ್ ಭರವಸೆ ವ್ಯಕ್ತಪಡಿಸಿದರು.
ಸಕ್ರಿಯ ರಾಜಕಾರಣಿಗಳ ಹತ್ತಿಕ್ಕಲು ಯತ್ನ
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮೀಸಲಾತಿ ವಿಚಾರ ಕುರಿತು ಮಾತನಾಡಿದ ಆರ್.ಪ್ರಸನ್ನಕುಮಾರ್, ಜಿಲ್ಲೆಯ ಸಕ್ರಿಯ ರಾಜಕಾರಣಿಗಳನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ. ಸ್ಥಳೀಯ ಸಮುದಾಯಗಳನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ಪ್ರಕಟಿಸಬೇಕು. ಹಾಗಾಗಿ ಜಿಲ್ಲಾ, ತಾಲೂಕು ಪಂಚಾಯಿತಿ ಮೀಸಲಾತಿ ವಿಚಾರದಲ್ಲಿ ಸಮಾಧಾನವಿಲ್ಲ ಎಂದರು.
ಡಿಕೆಶಿಯಿಂದ ಉತ್ಸಾಹ ಹೆಚ್ಚಳ
ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲೆ ಭೇಟಿ, ಯುವಕರಲ್ಲಿ ಉತ್ಸಾಹ ಹೆಚ್ಚಿಸಿದೆ. ಪಕ್ಷದ ಸಂಘಟನೆ ಚುರುಕು ಪಡೆದುಕೊಂಡಿದೆ. ಬಂಜಾರ ತಾಂಡಗಳಲ್ಲಿ ವಾಸಿಸುತ್ತಿರುವವರಿಗೆ ಸೌಲಭ್ಯ ಒದಗಿಸುವತ್ತ ಶ್ರಮಿಸಲಾಗುತ್ತದೆ ಎಂದು ತಿಳಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200