ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA NEWS | 21 ಮೇ 2020
ಸೊರಬ ತಾಲೂಕನಲ್ಲಿ ಮೊದಲ ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಹಿಳೆಯೊಬ್ಬರಲ್ಲಿ ಕರೋನ ಪತ್ತೆಯಾಗಿದ್ದು, ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಟ್ರಾವಲ್ ಹಿಸ್ಟರಿ ಪರಿಶೀಲನೆ
ಹಳೆ ಸೊರಬದ 60 ವರ್ಷದ ಮಹಿಳೆಯೊಬ್ಬರಿಗೆ ಕರೋನ ಸೋಂಕು ತಗುಲಿದೆ. ತೀವ್ರ ಉಸಿರಾಟ ತೊಂದರೆ ಸೋಂಕು (SARI) ಪತ್ತೆಯಾದ ಹಿನ್ನೆಲೆ, ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಮಹಿಳೆಯ ಟ್ರಾವಲ್ ಹಿಸ್ಟರಿ ಪತ್ತೆ ಹಚ್ಚಲಾಗುತ್ತಿದೆ. ಇದರ ಆಧಾರದಲ್ಲಿ ಪ್ರಮೈಮರಿ ಮತ್ತು ಸಕೆಂಡರಿ ಸಂಪರ್ಕಗಳನ್ನು ಪತ್ತೆ ಮಾಡುವುದು ಸುಲಭವಾಗಲಿದೆ.
ಹಳೆ ಸೊರಬ ಕಂಟೈನ್ಮೆಂಟ್ ಜೋನ್
ಹಳೆ ಸೊರಬವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಿ, ಸಂಪೂರ್ಣ ಬಂದ್ ಮಾಡಲಾಗಿದೆ. ಈ ಭಾಗದಲ್ಲಿ ಮನೆಯಿಂದ ಯಾರೂ ಹೊರಬರುವಂತಿಲ್ಲ ಎಂದು ತಿಳಿಸಲಾಗಿದೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮತ್ತೊಂದೆಡೆ ನಗರದ ವಿವಿಧೆಡೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422