ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SORABA | 5 ಜುಲೈ 2022
ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದ್ದರಿಂದ ನಾಟಕವೊಂದರ (DRAMA CONTROVERSY) ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಈ ಬೆಳವಣಿಗೆ ಪರ ಮತ್ತು ವಿರೋಧ ತೀವ್ರ ಚರ್ಚೆ ಹುಟ್ಟುಹಾಕಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಟ್ವೀಟ್ ಮಾಡಿದ್ದಾರೆ.
ಸೊರಬ ತಾಲೂಕು ಆನವಟ್ಟಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ‘ಜೊತೆಗಿರುವನು ಚಂದಿರ’ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ನಾಟಕ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದಾರೆ. ಹಾಗಾಗಿ ನಾಟಕವನ್ನು ಅರ್ಧಕ್ಕೆ ನಿಲ್ಲಿಸಲಾಯಿತು.
ಪ್ರದರ್ಶನದ ವೇಳೆ ಏನಾಯ್ತು?
ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಜಾನಪದ ಪರಿಷತ್ ಮತ್ತು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಆನವಟ್ಟಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಶಿವಮೊಗ್ಗದ ರಂಗ ಬೆಳಕು ತಂಡದ ವತಿಯಿಂದ ‘ಜೊತೆಗಿರುವನು ಚಂದಿರ’ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ನಾಟಕ ಪ್ರದರ್ಶನದ ವೇಳೆ ಹಿಂದೂ ಪರ ಸಂಘಟನೆ ಮುಖಂಡರಾದ ಶ್ರೀಧರಾಚಾರ್, ಮಂಜಣ್ಣ ಅವರು ವಿರೋಧ ವ್ಯಕ್ತಪಡಿಸಿದರು. ಸಭಾಂಗಣದ ಒಳಗೆ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ವಿಚಾರ ತಿಳಿಯುತ್ತಿದ್ದ ಹಾಗೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ಗೊಂದಲದ ಕಾರಣಕ್ಕೆ ನಾಟಕ ಪ್ರದರ್ಶನವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.
ವಿರೋಧಕ್ಕೆ ಕಾರಣವೇನು?
ನಾಟಕ (DRAMA CONTROVERSY) ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ ಕುರಿತು ಶ್ರೀಧರಾಚಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಹಿಂದೂ ಸಂಘಟನೆಯ ಕಾರ್ಯಕರ್ತನೆಂದು ನಾಟಕಕ್ಕೆ ಹೋಗಿರಲಿಲ್ಲ. ಒಬ್ಬ ಪ್ರೇಕ್ಷಕನಾಗಿ ನಾಟಕ ವೀಕ್ಷಣೆಗೆ ತೆರಳಿದ್ದೆ. ಲವ್ ಜಿಹಾದ್ ವಿಷಯ ಇಟ್ಟುಕೊಂಡು, ಹಿಂದೂ ಹುಡುಗ ಮುಸ್ಲಿಂ ಹುಡುಗಿ ವಿವಾಹ ಆದರೆ ದೇಶದಲ್ಲಿ ಸೌಹಾರ್ದತೆ ನೆಲೆಸಲಿದೆ ಎಂದು ನಾಟಕದಲ್ಲಿ ಚಿತ್ರಿಸಲಾಗಿದೆ. ಇದು ತಪ್ಪು ಗ್ರಹಿಕೆ. ಹಾಗಾಗಿ ನಾಟಕವನ್ನು ಇಲ್ಲಿಗೆ ನಿಲ್ಲಿಸಿ ಎಂದು ಆಯೋಜಕರಿಗೆ ತಿಳಿಸಿದೆ’ ಎಂದು ತಿಳಿಸಿದ್ದಾರೆ.
ಕಲಾವಿದರ ಒಕ್ಕೂಟದಿಂದ ವಿರೋಧ
ನಾಟಕ ಪ್ರದರ್ಶನದ ವೇಳೆ ಗೊಂದಲ ಸೃಷ್ಟಿಗೆ ಕಲಾವಿದರ ಒಕ್ಕೂಟ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಖಂಡನಾ ಸಭೆ ನಡೆಸಲಾಯಿತು.
ಸಾಗರದ ಸ್ಪಂದನಾ ರಂಗ ತಂಡದ ಎಂ.ವಿ.ಪ್ರತಿಭಾ ಅವರು ಮಾತನಾಡಿ, ಮುಸ್ಲಿಂ ಪಾತ್ರಗಳ ಕಥಾ ಹಂದರ ಹೊಂದಿದೆ ಎಂಬ ಕಾರಣಕ್ಕಾಗಿಯೇ ಈ ನಾಟಕ ಪ್ರದರ್ಶನ ನಿರ್ಭಂದಿಸಲಾಯಿತೆಂದರೆ ಇದಕ್ಕಿಂತ ನೀಚತನ ಇನ್ನೊಂದಿಲ್ಲ. ಫ್ಯಾಸಿಸ್ಟ್ ಶಕ್ತಿಗಳನ್ನು ಹೀಗೇ ಬೆಳೆಯಲು ಬಿಟ್ಟರೆ ಮತ್ತಷ್ಟು ದುರಂತಕ್ಕೆ ದಾರಿ ಮಾಡಿಕೊಟ್ಟ ಹಾಗೆ ಆಗುತ್ತದೆ. ಈ ಕೃತ್ಯ ಎಸಗಿದವರ ವಿರುದ್ದ ಈ ಕೂಡಲೇ ಕಾನೂನು ಕ್ರಮ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ನಮ್ ಟೀಮ್ ರಂಗ ತಂಡದ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಅವರು ಮಾತನಾಡಿ, ನಾಟಕ ನಿಲ್ಲಿಸಿರುವುದು ಅಘಾತಕಾರಿ. ಇದಕ್ಕೆ ಪ್ರತಿರೋಧ ದಾಖಲಿಸಬೇಕು. ಇಲ್ಲ ಅಂದರೆ ನಾಟಕ, ಸಂಗೀತ, ಸಾಹಿತ್ಯ ಕಾರ್ಯಕ್ರಮ ನಿಲ್ಲಸಬಹುದು ಎಂಬ ಮನಸ್ಥಿತಿ ಬರುತ್ತದೆ. ನಾಟಕ ನಿಲ್ಲಿಸಿದವರ ಮನಸ್ಥಿತಿ ಬೇರೆ ರೀತಿ ಯೋಚನೆ ಮಾಡುತ್ತಿರುತ್ತದೆ. ಇದಕ್ಕೆ ಅವಕಾಶ ಕೊಡಬಾರದು. ರಾಜ್ಯದ ಕಲಾವಿದರು ಈ ರೀತಿಯ ನಡೆಯನ್ನು ಖಂಡಿಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಮಾತನಾಡಿ, ಆತುರಗೇಡಿಗಳು ಪ್ರಜಾಸತ್ತಾತ್ಮಕವಾಗಿ ನಡೆದುಕೊಳ್ಳದೇ ಮತಿಹೀನರಂತೆ ನಡೆದುಕೊಂಡಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡಲು ಯತ್ನಿಸಿದ ಕೆಲವರ ಕುತಂತ್ರದಿಂದ ನಾಟಕವನ್ನು ಅರ್ಧಕ್ಕೆ ಮೊಟಕುಗೊಳಿಸಲಾಯಿತು. ಮತ್ತೆ ಅದೇ ನಾಟಕವನ್ನು ಪ್ರದರ್ಶನ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ ಎಂದರು.
ಟ್ವೀಟ್ ಮಾಡಿದ ಮಾಜಿ ಸಿಎಂ
ನಾಟಕ ಅರ್ಧಕ್ಕೆ ನಿಲ್ಲಿಸಿದ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ‘ಶಿವಮೊಗ್ಗದ ಅನವಟ್ಟಿಯಲ್ಲಿ ಕನ್ನಡ ನಾಟಕ ‘ಜತೆಗಿರುವನು ಚಂದಿರ’ ಪ್ರದರ್ಶನಕ್ಕೆ ಆರ್‌ಎಸ್‌ಎಸ್ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ. ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು. ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ, ನಾಟಕ ಕಲೆ ಮೊದಲಾದ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರ್ ಎಸ್ ಎಸ್ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ-ಆತಂಕಗಳನ್ನು ಎದುರಿಸುವ ಚೈತನ್ಯ ಕನ್ನಡದ ಸಾಂಸ್ಕೃತಿಕ ಲೋಕಕ್ಕೆ ಇದೆ.’ ಎಂದು ಟ್ವೀಟ್ ಮಾಡಿದ್ದಾರೆ.
ನಾಟಕ ಪ್ರದರ್ಶನಕ್ಕೆ ಅರ್ಧಕ್ಕೆ ಮೊಟಕುಗೊಳಿಸಿರುವುದು ಈಗ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ – ಬ್ಯಾಂಕ್ ನೊಟೀಸ್, ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422