SHIVAMOGGA LIVE NEWS | 3 NOVEMBER 2022
SORABA | ಈಡಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು. ರಾಜಕೀಯ ಪ್ರಾತಿನಿಧ್ಯ ಸಿಗಬೇಕು ಎಂದು ಆಗ್ರಹಿಸಿ ಬೆಂಗಳೂರಿನವರೆಗೆ ಪಾದಯಾತ್ರೆ (ediga padayathre) ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಹೊಸನಗರದಲ್ಲಿ ಆಯೋಜಿಸಿದ್ದ ಸಭೆ ಬಳಿಕ ಸೊರಬದಲ್ಲಿ ಸುದ್ದಿಗೋಷ್ಠಿ ನಡೆಸಿದ ಶ್ರೀ ಪ್ರಣವಾನಂದ ಸ್ವಾಮೀಜಿ, 2023ರ ಜನವರಿ 6ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತದೆ. ಈಡಿಗ ಸಮುದಾಯದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 658 ಕಿ.ಮೀ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
(ediga padayathre)
ಶೋಚನೀಯ ಸ್ಥಿತಿಯಲ್ಲಿ ಸಮುದಾಯ
ಈಡಿಗ ಸಮುದಾಯ ಸೇಂದಿ ತಯಾರಿಕೆಯನ್ನು ಕುಲ ಕಸುಬನ್ನಾಗಿ ಮಾಡಿಕೊಂಡು ಬಂದಿತ್ತು. ಈ ಕಸುಬನ್ನು ಸರ್ಕಾರ ನಿಷೇಧಿಸಿದೆ. ಆ ಬಳಿಕ ಪರಿಹಾರ ಒದಿಗಿಸಲು ಸರ್ಕಾರ ವಿಫಲವಾಯಿತು. ಎಲ್ಲಾ ಜಾತಿಗು ಒಂದೊಂದು ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಆದರೆ ಈಡಿಗ ಸಮುದಾಯವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಸಾಗರ ಕೋರ್ಟ್ ನಿಂದ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಬಂಧನ ವಾರೆಂಟ್, ಕಾರಣವೇನು?
ಈಡಿಗ ಸಮುದಾಯದ ಏಳು ಶಾಸಕರಿದ್ದಾರೆ. ಇಬ್ಬರು ಸಚಿವರಿದ್ದಾರೆ. ಆದರೆ ಸಮುದಾಯದ ಶೋಚನೀಯ ಪರಿಸ್ಥಿತಿ ಕುರಿತು ಅವರು ಚಕಾರ ಎತ್ತುತ್ತಿಲ್ಲ. ಸಮಾಜದ ಕೆಲವು ಸ್ವಾಮೀಜಿಗಳು ಕೂಡ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
(ediga padayathre)
ಏನೆಲ್ಲ ಬೇಡಿಕೆಗಳಿವೆ?
ಈಡಿಗ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಹೆಚ್ಚಳ ಮಾಡಬೇಕು. ಬ್ರಹ್ಮಶ್ರೀ ನಾರಾಯಣ ಗುರು ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. 2ಎ ವರ್ಗದಲ್ಲಿರುವ ಈಡಿಗ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಬೇಕು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಪೀಠ ಸ್ಥಾಪನೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ‘ಕಾಗೋಡು ತಿಮ್ಮಪ್ಪ ಸ್ಪರ್ಧೆಗೆ ಅವಕಾಶ ಕೊಡಬೇಕು, ಅವಿರೋಧ ಆಯ್ಕೆಗೆ ಸರ್ವ ಪಕ್ಷಗಳು ಮುಂದಾಗಬೇಕು’
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಲೇಖನಮೂರ್ತಿ, ಬಿ.ಜಿ.ನಾಗರಾಜ್, ಹೊಸಮನೆ ಚೇತನ್ ದಾಸ್, ಏರಗಿ ರಾಜು ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಆರ್ಯ ಈಡಿಗ ಮಹಾ ಮಂಡಳಿ ಪ್ರಧಾನ ಕಾರ್ಯದರ್ಶಿ ಡಾ. ಮಂಚೇಗೌಡ, ಸಾಗರ ತಾಲೂಕು ಅಧ್ಯಕ್ಷ ನಾಗರಾಜ ನಾಯ್ಕ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.