ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SORABA | 11 ಜೂನ್ 2022
ಬಗರ್ಹುಕುಂ ಮತ್ತು ಅರಣ್ಯಹಕ್ಕು ಸಾಗುವಳಿದಾರರಿಗೆ ಭೂಮಿಯ ಹಕ್ಕು ನೀಡಿದಾಗ ಮಾತ್ರ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಹೇಳಿದರು. farmers world
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನ.ಶ್ರೀನಿವಾಸ್ ಅವರು, ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಹಿತ ಕಾಯುವಲ್ಲಿ ವಿಫಲರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ರೈತರ ಪರವಾಗಿ ನಿಂತು ಬಗರ್ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕನ್ನು ನೀಡಿದ್ದರು. ಹಾಲಿ ಆಡಳಿತ ನಡೆಸುತ್ತಿರುವವರು ಮುಂಜೂರಾದ ಹಕ್ಕು ಪತ್ರಗಳನ್ನು ಸಹ ವಜಾ ಮಾಡುವ ಮೂಲಕ ರೈತ ಸಮೂಹಕ್ಕೆ ಅನ್ಯಾಯವೆಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ಭೂಮಿಯನ್ನು ಸಾಗುವಳಿ ಮಾಡಿದವರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಜೂ. 20ರಂದು ತಾಲೂಕು ಕೇಂದ್ರ ಸೊರಬದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಎಣ್ಣೆಕೊಪ್ಪ, ಕೆರೆಹಳ್ಳಿ, ತಾಳಗುಪ್ಪ ರೈತರನ್ನು ಅಕ್ರಮವಾಗಿ ಒಕ್ಕಲೆಬ್ಬಿಸಿರುವುದನ್ನು ಸಮಿತಿಯು ಬಲವಾಗಿ ಖಂಡಿಸುತ್ತದೆ. ಮುಂಬರುವ ಸೆಪ್ಟೆಂಬರ್ನಲ್ಲಿ ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು ಚುನಾವಣೆಯ ಒಳಗಾಗಿ ರೈತರ ಬೇಡಿಕೆಗಳು ಈಡೇರಬೇಕು. ಇಲ್ಲವಾದಲ್ಲಿ ಆಡಳಿತರೂಢ ಪಕ್ಷಗಳಿಗೆ ಹಾಗೂ ರೈತರ ಪರವಾದ ನಿಲುವು ತೋರದ ಶಾಸಕರಿಗೂ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಸಮನವಳ್ಳಿ ಸಮಿತಿಯ ತಾಲೂಕು ಅಧ್ಯಕ್ಷ ಪರಶುರಾಮ ಶಿಡ್ಡಿಹಳ್ಳಿ ಇದ್ದರು.
ಇದನ್ನೂ ಓದಿ – ರೈತರಿಗೆ ನೊಟೀಸ್, ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಪಾದಯಾತ್ರೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422