ಶಿವಮೊಗ್ಗ ಲೈವ್.ಕಾಂ | SORABA NEWS | 27 ಆಗಸ್ಟ್ 2020
ಸಾಲಬಾಧೆ ತಾಳಲಾರದೆ ಶುಂಠಿ ಬೆಳೆಗೆ ಸಿಂಪಡಿಸುವ ಔಷಧ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ನೆಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.
ಬಸವಂತಪ್ಪ (೫೫) ಆತ್ಮಹತ್ಯೆ ಮಾಡಿಕೊಂಡ ರೈತ. ಮಗಳ ಮದುವೆ ಮತ್ತು ಪ್ರಗತಿ ಗ್ರಾಮೀಣ ಬ್ಯಾಂಕ್ನಲ್ಲಿ ಸಾಲ ಮಾಡಿದ್ದರು. ಸುಮಾರು ೩.೭೦ ಲಕ್ಷ ರೂ. ಸಾಲವಿತ್ತು ಎಂದು ಹೇಳಲಾಗುತ್ತಿದೆ.
ಸಾಲ ತೀರಿಸಲು ಬಸವಂತಪ್ಪ ಅವರು ಶುಂಠಿ ಬೆಳೆಯನ್ನು ನಂಬಿಕೊಂಡಿದ್ದರು. ಆದರೆ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]