FATAFAT NEWS
ದೇವರ ಮೇಲಿದ್ದ ಚಿನ್ನದ ಸರ ಕಳ್ಳತನ
ಸೊರಬ: ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಮೂರ್ತಿ ಮೇಲಿದ್ದ ಚಿನ್ನದ ತಾಳಿ ಸರ (CHAIN) ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕಿನ ಕಡಸೂರು ಗ್ರಾಮದ ಶ್ರೀ ಮಾರಿಕಾಂಬ ದೇವಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವರ ಮೂರ್ತಿ ಮೇಲಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ 10 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಆಪರೇಷನ್ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ
ಮಹಿಳೆಯ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನ
ಸೊರಬ: ಬಸ್ ಇಳಿದು ನಡೆದು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾಂಗಲ್ಯ ಸರದ ಸ್ವಲ್ಪ ಭಾಗ ಕಸಿದುಕೊಂಡಿದ್ದಾರೆ. ಚಂದ್ರಮ್ಮ ಎಂಬುವವರು ಸೊರಬ ತಾಲೂಕು ಸಂಪಗೋಡಿನಲ್ಲಿ ಬಸ್ ಇಳಿದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳ ಪೈಕಿ ಒಬ್ಬಾತ ಮಹಿಳೆಯ ಮಾಂಗಲ್ಯ ಸರಕ್ಕೆ ಕೈ ಹಾಕಿದ್ದ. ಮಹಿಳೆಯು ಮಾಂಗಲ್ಯ ಸರವನ್ನು ಬಿಗಿ ಹಿಡಿದುಕೊಂಡಿದ್ದು, ಸ್ವಲ್ಪ ಭಾಗ ಮಾತ್ರ ಆತ ಕಸಿದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. 55 ಸಾವಿರ ರೂ. ಮೌಲ್ಯದ 6-7 ಗ್ರಾಂ ಸರ ಕಸಿದುಕೊಂಡಿರುವ ಸಾಧ್ಯತೆ ಇದೆ ಎಂದು ಆನವಟ್ಟಿ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ
ಸೊರಬ: ಮನೆ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳ್ಳತನವಾಗಿದೆ ಎಂದು ಆರೋಪಿಸಿ ಸೊರಬ ತಾಲೂಕು ನೇರಲಗಿ ಗ್ರಾಮದ ರೈತ ಬಸವರಾಜ ಎಂಬುವವರು ದೂರು ನೀಡಿದ್ದಾರೆ. ಗದ್ದೆ ಕೆಲಸ ಮುಗಿಸಿಕೊಂಡು ಮನೆ ಬಂದು ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಹೊರ ಬಂದಾಗ ಬೈಕ್ ಕಳ್ಳತನವಾಗಿತ್ತು. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200