ಶಿವಮೊಗ್ಗ ಲೈವ್.ಕಾಂ | SORABA NEWS | 7 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಆಡ್ಡೆಯ ಮೇಲೆ ಆನವಟ್ಟಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಒಬ್ಬನನ್ನು ಬಂಧಿಸಿದ್ದು ನಾಲ್ವರು ಪರಾರಿಯಾಗಿದ್ದಾರೆ.
ಸೊರಬ ತಾಲೂಕು ಆನವಟ್ಟಿ ವಲಯದ ತವನಂದಿ ಶಾಖೆಯ ಕೆರೆಕೊಪ್ಪ ಗ್ರಾಮದ ಸ.ನಂ.13ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ, ಆಕ್ರಮವಾಗಿ ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಕೆರೆಕೊಪ್ಪ ಗ್ರಾಮದ ನಾರಾಯಣಪ್ಪ ಎಂಬಾತನನ್ನು ಬಂಧಿಸಲಾಗಿದೆ.

ಜಿಂಕೆ ತಲೆ ಸೇರಿ ಮಾಂಸ, 2 ಕತ್ತಿ, 2 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ಬೂದ್ಯಪ್ಪ, ನಾಗಪ್ಪ, ಆಸೀಫ್, ಆಲಿ ಸಾಬ್ ಫೈಜಾನ್ ಸಾಬ್ ಎಂಬುವವರು ತಲೆಮರೆಸಿಕೊಂಡಿದ್ದಾರೆ.
ಸೊರಬ ಎಸಿಎಫ್ ಪ್ರವೀಣ್ ಕುಮಾರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






