ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SORABA : ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನ ದಿನ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆಯೊಬ್ಬರು ಮೃತಪಟ್ಟಿದ್ದಾರೆ. ಶಶಿಕಲಾ ಸಾಹುಕಾರ (47) ಮೃತ ಗ್ರಾಮ ಪಂಚಾಯಿತಿ ಸದಸ್ಯೆ. ಅಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಲು ಇವರಿಗೆ ಅವಕಾಶವಿತ್ತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆನವಟ್ಟಿ (Anavatti) ಹೋಬಳಿ ಭಾರಂಗಿ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆ ಶಶಿಕಲಾ ಸಾಹುಕಾರ ಅವರು ಅನಾರೋಗ್ಯದಿಂದ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನದಿಂದ ಶಶಿಕಲಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದಾರೆ.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಮೂವರು ಅರೆಸ್ಟ್, ವಿಚಾರಣೆ ವೇಳೆ ಹೇಳಿದ್ದೇನು?
ಭಾರಂಗಿ ಗ್ರಾಮ ಪಂಚಾಯಿತಿಗೆ ಎರಡನೆ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ. ಇವತ್ತು ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಹಾಗಾಗಿ ಶಶಿಕಲಾ ಅವರು ಸ್ಪರ್ಧಿಸುವ ಅವಕಾಶವಿತ್ತು.