ಸೊರಬ: ಇಲ್ಲಿನ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘94 ಸಿ’ ಹಕ್ಕುಪತ್ರ, ಕಂದಾಯ ಇಲಾಖಾ ನೌಕರರಿಗೆ ಬಹುಮಾನ ವಿತರಣೆ (distribution) ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಡವರನ್ನು ಭೂ ಒಡೆಯರನ್ನಾಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ‘94 ಸಿ’ ಅಡಿಯಲ್ಲಿ ಹಕ್ಕುಪತ್ರ ಕೊಡುತ್ತಿರುವ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಶ್ರಮವಿದೆ ಎಂದರು.
ತಹಶೀಲ್ದಾರ್ ಮಂಜುಳಾ ಹೆಗಡಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕಿನ ವಿವಿಧ ಗ್ರಾಮಗಳ ನಿವಾಸಿಗಳಿಗೆ ಸಚಿವ ಮಧು ಬಂಗಾರಪ್ಪ ಹಕ್ಕುಪತ್ರ ವಿತರಿಸಿದರು.
ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ಪಟ್ಟಣ ಪಂಚಾಯಿತಿ ಇಒ ಶಶಿಧರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ನೇತ್ರಾವತಿ, ಪುರಸಭೆ ಮುಖ್ಯಾಧಿಕಾರಿ ಚಂದನ್, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಉಪಾಧ್ಯಕ್ಷೆ ಶ್ರೀರಂಜನಿ ಪ್ರವೀಣಕುಮಾರ್ ಸೇರಿ ಹಲವರು ಇದ್ದರು.
ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್, CCTV ಚೆಕ್ ಮಾಡಿದ ಬ್ಯಾಂಕ್ ಸಿಬ್ಬಂದಿ ಆಘಾತ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200