SHIVAMOGGA LIVE NEWS | 1 MARCH 2023
SORABA : ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ (Honey Bee) ಮಾಡಿದ್ದು ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೊರಬ ತಾಲೂಕು ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು (Honey Bee) ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ ಸಮುದಾಯ ಕೇಂದ್ರಕ್ಕೆ ದಾಖಲು ಮಾಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೆಚ್ಚಿನ ಚಿಕಿತ್ಸೆಗಾಗಿ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ. ದಂಪತಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ನಡುರಸ್ತೆಯಲ್ಲಿ ಕೊರಿಯರ್ ಸರ್ವಿಸ್ ಯುವಕನ ಮುಖಕ್ಕೆ ಹೊಡೆದ ‘ಕಪ್ಪು ಅಂಗಿ’ ವ್ಯಕ್ತಿ