ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ, ಎಷ್ಟಿತ್ತು ಕಾಣಿಕೆ ಹಣ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಸೊರಬ: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯವು ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. ಈ ಬಾರಿ ದೇವಿಯ ಸನ್ನಿಧಿಯಲ್ಲಿ ಒಟ್ಟು ₹33,90,580 ಕಾಣಿಕೆ ಹಣ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಅವರ ನೇತೃತ್ವದಲ್ಲಿ ಹುಂಡಿ ಎಣಿಕೆ ಪ್ರಕ್ರಿಯೆ ನಡೆಸಲಾಯಿತು. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಹುಂಡಿ ಎಣಿಕೆಯ ವೇಳೆಯಲ್ಲಿ ಒಟ್ಟು ₹14,20,755 ಸಂಗ್ರಹವಾಗಿತ್ತು.

Hundi-collection-Counting-at-Chandragutti-Renukamba-Temple

ಹುಂಡಿ ಎಣಿಕೆ ಕಾರ್ಯವು ಅತ್ಯಂತ ಪಾರದರ್ಶಕವಾಗಿ ನಡೆಯಲು ಎಣಿಕೆ ಕಾರ್ಯ ನಡೆಯುವ ಕೊಠಡಿಯ ಸುತ್ತಲೂ ಸಿಸಿಟಿವಿ (CCTV) ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಭದ್ರತೆಯನ್ನು ನಿಯೋಜಿಸಲಾಗಿತ್ತು. ಮುಜರಾಯಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು, ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.