ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA NEWS | 27 JUNE 2021
ವಿಧಾನಸೌಧದ ಆವರಣದಲ್ಲಿ ಶ್ರೀ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಸ್ವಾಗತಿಸಿದ್ದಾರೆ.
12ನೇ ಶತಮಾನದ ಅವಧಿಯಲ್ಲಿ ವಚನಕಾರ ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ್ದಾರೆ. ಸಮಾನತೆಯ ಹರಿಕಾರರಾದ ಶ್ರೀ ಬಸವೇಶ್ವರರ ಪುತ್ಥಳಿಯನ್ನು ರಾಜ್ಯದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಕುಟಪ್ರಾಯವಾಗುತ್ತದೆ ಎಂದು ಮುಖ್ಯಮಂತ್ರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ ಆದೇಶದಲ್ಲಿಯೇ ತಿಳಿಸಿರುವುದು ಬಸವಾನುಯಾಯಿಗಳಿಗೆ ಸಂತಸ ಹೆಚ್ಚಿದೆ ಎಂದಿದ್ದಾರೆ.
ವಿಧಾನಸೌಧ ನಿರ್ಮಿಸಿ ಆರು ದಶಕಗಳು ಕಳೆದಿದೆ. ಅಂದಿನ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ದೂರದರ್ಶಿತ್ವದಿಂದ ವಿಧಾನಸೌಧ ನಿರ್ಮಿಸಲು ಸಾಧ್ಯವಾಯಿತು. ಅದಕ್ಕೆ ಕಳಸದಂತೆ ವಿಧಾನಸೌದ ಮುಂಭಾಗ ಪ್ರಜಾಪ್ರಭುತ್ವದ ಬುನಾದಿಯಾದ ಅನುಭವ ಮಂಟಪದ ಸ್ಥಾಪಕ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಯಡಿಯೂರಪ್ಪ ಅವರಿಂದ ಸಾಧ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.
ಕಾಯಕ ಮತ್ತು ದಾಸೋಹಕ್ಕೆ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ, ಸಮಾನತೆಯ ಹರಿಕಾರರಿಗೆ ನೀಡುತ್ತಿರುವ ಗೌರವವಾಗಿದ್ದು, ಇದನ್ನು ನಾಡಿನ ಸಮಸ್ತ ಜನತೆ ಹರ್ಷದಿಂದ ಸ್ವಾಗತಿಸುತ್ತದೆ ಎಂದು ತಿಳಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422