ಶಿವಮೊಗ್ಗ ಲೈವ್.ಕಾಂ | 5 ಜನವರಿ 2019
ಕಳ್ಳಬಟ್ಟಿ ಸಂಗ್ರಹಿಸಿ ಮಾರಲು ಮುಂದಾಗಿದ್ದ ವ್ಯಕ್ತಿಗೆ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸೊರಬ ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಇಲ್ಲಿನ ರಾಮಗೊಂಡನಕೊಪ್ಪದ ಗೋವಿಂದಪ್ಪ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪ ಸಾಬೀತಾಗಿರುವ ಹಿನ್ನೆಲೆ, ಗೋವಿಂದಪ್ಪಗೆ ನ್ಯಾ.ಶರತನ್ ಶಿಕ್ಷೆ ಪ್ರಕಟಿಸಿದ್ದಾರೆ. ಒಂದು ವೇಳೆ ದಂಡದ ಮೊತ್ತ ಪಾವತಿಸದಿದ್ದರೆ, ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದ್ದಾರೆ. ಸರ್ಕಾರದ ಪರ ಅಭಿಯೋಜಕ ಸಂಜೀವ್ ಜೋಶಿ ವಾದಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]