ಸೊರಬ, ಸಾಗರದಲ್ಲಿ ಜನಸ್ಪಂದನ ಸಭೆ, ಯಾವ್ಯಾವಾಗ ಎಲ್ಲಿ ನಡೆಯುತ್ತೆ ಸಭೆ?

ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಸೊರಬ ತಾಲ್ಲೂಕುಗಳಲ್ಲಿ ತಾಲೂಕು ಮಟ್ಟದ ಜನಸ್ಪಂದನ ಆಂದೋಲನ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.  

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆಗಳು ನಡೆಯಲಿವೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

Madhu-Bangarappa-meeting-at-Shimoga-DC-office.

ಎಲ್ಲೆಲ್ಲಿ ಯಾವಾಗ ಸಭೆ?

  • ಸೊರಬ: ಅಕ್ಟೋಬರ್‌ 3ರಂದು ಬೆಳಿಗ್ಗೆ 9.30ಕ್ಕೆ ಸೊರಬ ಪಟ್ಟಣ ರಂಗಮಂದಿರದಲ್ಲಿ ಜನಸ್ಪಂದನ ಸಭೆ ನಡೆಯಲಿದೆ.
  • ಸಾಗರ: ಅಕ್ಟೋಬರ್‌ 5ರಂದು ಬೆಳಿಗ್ಗೆ 9.30ಕ್ಕೆ ನಗರಸಭೆ ಆವರಣದಲ್ಲಿರುವ ಗಾಂಧಿ ಮೈದಾನದ ರಂಗಮಂದಿರದಲ್ಲಿ ಸಭೆ ನಡೆಯಲಿದೆ.