ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 14 DECEMBER 2024
ಸೊರಬ : ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಪರಶುರಾಮ್ ಅವರ ಅಂತ್ಯಕ್ರಿಯೆಯನ್ನು (Last Rites) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಅವರ ಹುಟ್ಟೂರು ಸೊರಬ ತಾಲೂಕು ಸಂಪಗೋಡು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಶಿವಮೊಗ್ಗಕ್ಕೆ ಬಂದಾಗ ಹೃದಯಾಘಾತ
ಪರಶುರಾಮ್ ಅವರು ತೀರ್ಥಹಳ್ಳಿಯ ಹೈವೇ ಪ್ಯಾಟ್ರೋಲ್ ವಾಹನದ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯ ನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದಾಗ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ಹೊತ್ತಿಗಾಗಲೆ ಅವರು ಮೃತಪಟ್ಟಿದ್ದರು. ಪರಶುರಾಮ್ ಅವರು 2005ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು.
ಹುಟ್ಟೂರಿನಲ್ಲಿ ಅಂತ್ಯಕ್ರಿಯೆ
ಪರಶುರಾಮ್ ಕೊನೆಯುಸಿರೆಳೆದ ವಿಷಯ ತಿಳಿದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮತ್ತು ಅವರ ಕುಟುಂಬದವರು ಅಂತಿಮ ದರ್ಶನ ಪಡೆದರು. ಬಳಿಕ ಶಿವಮೊಗ್ಗದಿಂದ ಸೊರಬದ ಸಂಪಗೋಡು ಗ್ರಾಮಕ್ಕೆ ಪಾರ್ಥೀವ ಶರೀರ ಕೊಂಡೊಯ್ಯಲಾಯಿತು.
ಇದನ್ನೂ ಓದಿ » ಶಿವಮೊಗ್ಗ – ಮೈಸೂರು ಹೊಸ ರೈಲಿಗೆ ಬೇಡಿಕೆ ಇಟ್ಟ ಸಂಸದ
ಹುಟ್ಟೂರಿನಲ್ಲಿ ಸರ್ಕಾರಿ ಗೌರವದೊಂದಿಗೆ ಪರಶುರಾಮ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸಂಬಂಧಿಕರು, ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಅಂತಿಮ ದರ್ಶನ ಪಡೆದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422