ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ANAVATTI : ಎಲೆಕ್ಟ್ರಿಕ್ ಕಾಂಟ್ರಾಕ್ಟರ್ ಒಬ್ಬರಿಂದ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮೆಸ್ಕಾಂ ಇಲಾಖೆ ಎಇಇ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಆನವಟ್ಟಿಯ ಮೆಸ್ಕಾಂ ಎಇಇ ಜಿ.ರಮೇಶ್ ಎಂಬುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ?
ಸೊರಬದ ಪ್ರದೀಪ್ ಅಕ್ರಮ ಸಕ್ರಮ ಯೋಜನೆ ಅಡಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯ ಗುತ್ತಿಗೆ ಪಡೆದಿದ್ದರು. ಲೈನ್ ಕೆಲಸ ಪೂರ್ಣಗೊಳಿಸಲು 25 ಕೆ.ವಿ.ಯ ಟಿ.ಸಿ.ಗಳನ್ನು ಅಳವಡಿಸುವ ಕಾಮಗಾರಿ ಬಾಕಿ ಇತ್ತು. ಈ ಹಿನ್ನೆಲೆ 7 ಟಿ.ಸಿ.ಗಳನ್ನು ಒದಗಿಸುವಂತೆ ಮನವಿ ಮಾಡಿದ್ದರು. ಇದಕ್ಕಾಗಿ 20 ಸಾವಿರ ರೂ. ಹಣ ನೀಡುವಂತೆ ಪ್ರದೀಪ್ಗೆ ಎಇಇ ರಮೇಶ್ ಸೂಚಿಸಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳಿಗೆ ಪ್ರದೀಪ್ ದೂರು ನೀಡಿದ್ದರು.
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ
ಎಇಇ ರಮೇಶ್ ತಮ್ಮ ಕಚೇರಿಯಲ್ಲಿ ಇವತ್ತು ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಪೊಲೀಸ್ ಅಧೀಕ್ಷಕ ವಾಸುದೇವರಾಮ ಮಾರ್ಗದರ್ಶನದಲ್ಲಿ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯ್ಕ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ದಾಳಿಯಲ್ಲಿ ಸಿಬ್ಬಂದಿ ಮಹಂತೇಶ, ಸುರೇಂದ್ರ, ಬಿ.ಟಿ. ಚನ್ನೇಶ, ಪ್ರಶಾಂತ್ಕುಮಾರ್, ಅರುಣ್ಕುಮಾರ್, ದೇವರಾಜ, ರಘುನಾಯ್ಕ, ಪುಟ್ಟಮ್ಮ, ಕೆ.ಸಿ. ಜಯಂತ, ಗಂಗಾಧರ, ವಿ. ಗೋಪಿ, ಮತ್ತು ಪ್ರದೀಪ್ ಕುಮಾರ್ ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ, ಇಬ್ಬರು ವಶಕ್ಕೆ