ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 ಮಾರ್ಚ್ 2022
ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಆನವಟ್ಟಿ ವಿಠಲ ದೇವಸ್ಥಾನದಿಂದ ಮೆಸ್ಕಾಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು.
ಸೊರಬದ ಕುಬಟೂರಿನ ತಮ್ಮ ಮನೆಯಲ್ಲಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದ ಮುಖಂಡರ ಸಭೆ ನಡೆಸಿದರು. ಈ ಸಂದರ್ಭ ಮಾತನಾಡಿದ ಮಧು ಬಂಗಾರಪ್ಪ ಅವರು, ಮಾರ್ಚ್ 14ರಂದು ಆನವಟ್ಟಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಉಚಿತ ವಿದ್ಯುತ್ ಕೊಟ್ಟಿದ್ದರು ಬಂಗಾರಪ್ಪ
ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ರಾಜ್ಯದ ರೈತರ ಪಂಪ್ ಸೆಟ್’ಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಿದ್ದರು. ಆದರೆ ಬಂಡವಾಳಶಾಹಿಗಳ ಕೈಗೊಂಬೆ ಆಗಿರುವ ಬಿಜೆಪಿ ಸರ್ಕಾರ, ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡುತ್ತಿದೆ. ರೈತರಿಗೆ ಸಂಕಷ್ಟ ಉಂಟು ಮಾಡುತ್ತಿದೆ ಎಂದು ಆರೋಪಿಸಿದರು.
ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ.ಪಾಟೀಲ್, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಪ್ರಮುಖರಾದ ತಬಲಿ ಬಂಗಾರಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






