ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 JANUARY 2024
SORABA : ಬಂಕಸಾಣದ ಹೊಳೆಲಿಂಗೇಶ್ವರ ರಥೋತ್ಸವಕ್ಕೆ ಸಚಿವ ಮಧು ಬಂಗಾರಪ್ಪ ರಥ ಎಳೆದು ಚಾಲನೆ ನೀಡಿದರು. ವರದಾ ಮತ್ತು ದಂಡಾವತಿ ನದಿಗಳ ಸಂಗಮ ಕ್ಷೇತ್ರದಲ್ಲಿ ರಥೋತ್ಸವ ನಡೆಯಿತು. ಇದಕ್ಕೂ ಮೊದಲು ಹೊಳೆಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು.
ದೊಡ್ಡ ಸಂಖ್ಯೆಯ ಭಕ್ತರು ಭಾಗಿ
ಶ್ರೀ ಹೊಳೆಲಿಂಗೇಶ್ವರ ದೇವರ ಜಾತ್ರೆ ಅಂಗವಾಗಿ ರಥೋತ್ಸವ ನಡೆಯಿತು. ಸುತ್ತಮುತ್ತಲ ವಿವಿಧ ಗ್ರಾಮಗಳು, ನೆರೆಯ ತಾಲೂಕು, ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ದೇವರ ದರ್ಶನ ಪಡೆದು, ರಥ ಎಳೆದರು.
ಸಮಾನ್ಯರಂತೆ ಮಿನಿಸ್ಟರ್ ಸುತ್ತಾಟ
ಬಂಕಸಾಣ ಗ್ರಾಮದ ಜಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಜನರೊಂದಿಗೆ ಅಂಗಡಿಗಳಿಗೆ ಭೇಟಿ ನೀಡಿದರು. ತಿಂಡಿ, ತಿನಿಸು ಖರೀದಿಸಿ ಕಾರ್ಯಕರ್ತರಿಗೆ ಹಂಚಿದರು. ಜಾತ್ರೆಯಲ್ಲಿ ಭಾಗವಹಿಸಿದ್ದ ವಿವಿಧ ಕಲಾತಂಡಗಳ ಕಲಾವಿದರನ್ನು ಮಾತನಾಡಿಸಿದರು. ಜಾತ್ರೆ ಅಂಗವಾಗಿ ಶ್ರೀ ಸಂತ ಶರೀಫ ಶಿವಯೋಗಿ ನಾಟ್ಯ ಸಂಘಟಕ್ಕೆ ಭೇಟಿ ನೀಡಿ ಕಲಾವಿದರ ಮನವಿ ಆಲಿಸಿದರು. ವೈಯಕ್ತಿಕವಾಗಿ 50 ಸಾವಿರ ರೂ. ನೆರವು ನೀಡಿದರು. ಅಲ್ಲದೆ ಸರ್ಕಾರದ ವತಿಯಿಂದಲು ನೆರವು ಕೊಡಿಸುವ ಭರವಸೆ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಿನಿಸ್ಟರ್ vs ಸಂಸದ, ಪರಸ್ಪರ ಟೀಕೆ, ಸವಾಲು, ಕಾರಣವೇನು?
ತಹಶೀಲ್ದಾರ್ ಹುಸೇನ್ ಸರಕಾವಸ್, ಜಾತ್ರೆ ಸಮಿತಿ ಅಧ್ಯಕ್ಷ ರಾಜಪ್ಪ ಗೌಡ ಬಂಕಸಾಣ, ಧರ್ಮದರ್ಶಿ ಬಸವರಾಜ್ ಗೌಡ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422