SHIVAMOGGA LIVE NEWS | 10 OCTOBER 2023
SORABA : ಶ್ರೀಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದಸರಾ ಉತ್ಸವ (Dasara Utsava) ಆಚರಿಸಲು ಖಾಸಗಿ ಸಮಿತಿಯವರಿಗೆ ಅವಕಾಶ ಒದಗಿಸಬಾರದು ಎಂದು ಆಗ್ರಹಿಸಿ ಶ್ರೀ ರೇಣುಕಾಂಬ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ತಹಸೀಲ್ದಾರ್ ಹುಸೇನ್ ಸರಕಾವಸ್ ಅವರಿಗೆ ಮನವಿ ಸಲ್ಲಿಸಲಾಯಿತು.
![]() |
ದಸರಾ ಆಚರಣೆ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಖಾಸಗಿಯವರಿಗೆ ಅವಕಾಶ ನೀಡಿದರೆ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಈ ಬಗ್ಗೆ ಗ್ರಾಮಸ್ಥರು ದೇವಸ್ಥಾನ ಸಮಿತಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿಂದಿನ ಸಭೆಯಲ್ಲಿ ತಿಳಿಸಿದಂತೆ ಖಾಸಗಿಯವರಿಗೆ ಅವಕಾಶ ಒದಗಿಸಬಾರದು. ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾದರೆ ಅಧಿಕಾರಿಗಳೆ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ದೇವಸ್ಥಾನ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ, ಶಿವಶಂಕರಗೌಡ, ಪ್ರವೀಣ್ ಮಿರ್ಜಿ ಇತರರಿದ್ದರು.
ಇದನ್ನೂ ಓದಿ – ಚಂದ್ರಗುತ್ತಿ ರೇಣುಕಾಂಬ ದೇಗುಲದಲ್ಲಿ ನೂಲು ಹುಣ್ಣಿಮೆ, ಲಕ್ಷ ಲಕ್ಷ ಭಕ್ತರು ಭಾಗಿ, ಹೇಗಿತ್ತು ಪೂಜಾ ವೈಭವ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200