ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಆನವಟ್ಟಿ: ರಾಷ್ಟ್ರೀಯ ಜಾನುವಾರು (Cattles)ರೋಗಗಳ ನಿಯಂತ್ರಣ ಯೋಜನೆಯಡಿ ಜಾನುವಾರುಗಳಿಗೆ ನೀಡುತ್ತಿರುವ ಉಚಿತ ಲಸಿಕೆ ಸೌಲಭ್ಯವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾಲುಬಾಯಿ ರೋಗ ಮುಕ್ತ ರಾಜ್ಯವನ್ನಾಗಿಸುವ ಸಂಕಲ್ಪ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದರು.
ಆನವಟ್ಟಿ ಸಮೀಪದ ಗಿಣಿವಾಲ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ರೋಗ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಲಸಿಕಾದಾರರು ನಿಮ್ಮ ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ರೈತರು ನಿರ್ಲಕ್ಷ್ಯವಹಿಸದೇ ಅವರಿಗೆ ಸಹಕರಿಸಿ ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ ಎಂದು ಹೇಳಿದರು.
ಕಾಲುಬಾಯಿ ಜ್ವರ, ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುತ್ತದೆ. ಹೀಗಾಗಿ ಈ ರೋಗ ನಿಯಂತ್ರಿಸುವ ಜೊತೆಗೆ ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ ಕುಮಾರ್, ಮುಖಂಡರಾದ ಗಣಪತಿ ಹುಲ್ತಿಕೊಪ್ಪ, ಕೆ.ಪಿ. ರುದ್ರಗೌಡ ಗಿಣಿವಾಲ, ಜಿ.ಡಿ. ಮಂಜುನಾಥ್, ರಮೇಶ ಶಂಕರಘಟ್ಟ, ಕೆ.ವಿ.ಗೌಡ, ಆರ್.ಸಿ.ಪಾಟೀಲ್ ಮಲ್ಲಾಪುರ, ವೈದ್ಯರಾದ ಹನುಮಂತ ರಾವ್ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಆನಂದಪುರ ಬಳಿ ಕೆರೆಗೆ ಹಾರಿ ವೃದ್ಧ ಆತ್ಮಹತ್ಯೆ
Cattles






