ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 31 AUGUST 2024 : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಎರಡು ದಿನ ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಬಗರ್ ಹುಕುಂ ಸಮಿತಿ ಸಭೆ, ಜನತಾ ದರ್ಶನ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸೆ.1ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಆನವಟ್ಟಿಯ ಶರಣ ನೂಲಿ ಚಂದ್ರಯ್ಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೆ.2ರಂದು ಬೆಳಗ್ಗೆ 10 ಗಂಟೆಗೆ ಸೊರಬ ತಾಲೂಕು ಕಚೇರಿಯಲ್ಲಿ ತಾಲೂಕು ಬಗರ್ ಹುಕುಂ, ಅಕ್ರಮ ಸಕ್ರಮ ಸಮಿತಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟಗೆ ಸೊರಬದ ರಂಗಮಂದಿರದಲ್ಲಿ ಕಂದಾಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜಂಟಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸೊರಬ ರಂಗಮಂದಿರದಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ನಾಳೆ ಮಕ್ಕಳು, ತಾಯಂದಿರಿಗೆ ರಾಧಾ – ಕೃಷ್ಣ – ಯಶೋಧಾ ವೇಷಭೂಷಣ ಸ್ಪರ್ಧೆ, ಎಲ್ಲಿ? – ಫಟಾಫಟ್ ನ್ಯೂಸ್